ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿ : ಉತ್ತರ ವಾಹಿನಿ ಹೊರೆಕಾಣಿಕೆ ಸಮರ್ಪಣೆ 

Posted On: 24-02-2025 07:26AM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಡುಪಿ ಜಿಲ್ಲೆಯ ವಿವಿಧ ಭಾಗಗಳಿಂದ ಸಮರ್ಪಿಸಿದ ಉತ್ತರವಾಹಿನಿ ಹೊರೆಕಾಣಿಕೆ ಮೆರವಣಿಗೆಗೆ ರವಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಅವರು  ಪಾಂಗಾಳ ಸೇತುವೆ ಬಳಿ ಚಾಲನೆ ನೀಡಿದರು.

ಹೊರೆಕಾಣಿಕೆಯಲ್ಲಿ ಅಕ್ಕಿ, ಬೆಲ್ಲ, ತರಕಾರಿಗಳು, ದವಸ ಧಾನ್ಯಗಳನ್ನು 500ಕ್ಕೂ ಅಧಿಕ ವಾಹನಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಕಾಪು ಪೇಟೆಯಾಗಿ ಹೊಸ ಮಾರಿಗುಡಿ ತಲುಪಿತು.  

ಮೆರವಣಿಗೆಯಲ್ಲಿ ಮಹಿಳೆಯರ ಡೊಳ್ಳು ಕುಣಿತ, ವೀರಗಾಸೆ, ಡೋಲು ವಾದನ, ತಾಲೀಮು, ಪುರುಷರು, ಮಹಿಳೆಯರು ಹಾಗೂ ಮಕ್ಕಳ ಕುಣಿತ ಭಜನೆ, ಕೊಂಬು, ಬಿರುದಾವಳಿ, ಕೀಲು ಕುದುರೆ, ವಿವಿಧ ರೀತಿಯ ಟ್ಯಾಬ್ಲೋ, ಹುಲಿ ವೇಷ ಕುಣಿತ, ಚೆಂಡೆ ಸಹಿತ ವಿವಿಧ ವೇಷಗಳು ಮೆರವಣಿಗೆಗೆ ರಂಗು ತಂದಿತು. ನವೋದಯ ಸ್ವಸಹಾಯ ಗುಂಪು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಈ ಸಂದರ್ಭ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದೇವಸ್ಥಾನ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಹೊರೆಕಾಣಿಕೆ ಸಮರ್ಪಣಾ ಸಮಿತಿಯ ಅಧ್ಯಕ್ಷ ಐಕಳಬಾವ ಡಾ. ದೇವಿಪ್ರಸಾದ್‌ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು,  ಸಾಯಿ ಈಶ್ವರ್ ಗುರೂಜಿ, ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್, ಕೆ. ರಘಪತಿ ಭಟ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ರಮೇಶ್ ಹೆಗ್ಡೆ ಕಲ್ಯ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್‌ ಕುಮಾರ್ ಶೆಟ್ಟಿ, ಭಗವಾನ್ ದಾಸ್ ಶೆಟ್ಟಿಗಾರ್,  ಸಂದೀಪ್ ಶೆಟ್ಟಿ ಮುಂಬಯಿ, ಮಾಧವ ಆರ್. ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಡಾ. ಸುನೀತಾ ಶೆಟ್ಟಿ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.