ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Posted On: 27-02-2025 11:02AM

ಕಾಪು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ, ಸಾಮಾಜಿಕ ಹೋರಾಟಗಾರರಾದ ಫಾದರ್ ವಿಲಿಯಮ್ ಮಾರ್ಟೀಸ್, ಕಿಶನ್ ಹೆಗ್ಡೆ ಕೊಲ್ಕೆಬೈಲ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಅಧ್ಯಕ್ಷರಾದ ಮೊಹಮ್ಮದ್ ಮೌಲ, ಸಾಪಳ್ಯ ಟ್ರಸ್ಟ್ ನ ನಿರೂಪಮ ಪ್ರಸಾದ್ ಶೆಟ್ಟಿ, ಸಾಮಾಜಿಕ ಹೋರಾಟಗಾರ್ತಿ ಮಮತಾ ಗಟ್ಟಿ, ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವ್ಯವಸ್ಥಾಪಕರಾದ ಹಫೀಜ್ ರೆಹಮಾನ್, ರಾಘವೇಂದ್ರ ನಾಯಕ್, ತಂಜಿಮ್ ಶಿರ್ವ ಮತ್ತಿತರರು ಉಪಸ್ಥಿತರಿದ್ದರು.