ಕಾಪು : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನದಲ್ಲಿ ನವಕುಂಭಗಳಲ್ಲಿ ಪೂಜೆಗೊಂಡ
ಗಂಗಾಜಲವನ್ನು ಪೂರ್ಣಕುಂಭದ ಮೆರವಣಿಗೆಯೊಂದಿಗೆ ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ತರಲಾಯಿತು.
ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಫೆ. 14ರ ಶುಕ್ರವಾರದಂದು ಬೆಳಿಗ್ಗಿನ ಜಾವ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣದಿಂದ
ಶೋಭಾಯಾತ್ರೆಯ ಮೂಲಕ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನಕ್ಕೆ ಗಂಗಾಜಲ ತರಲಾಗಿತ್ತು.
ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ. ಪಿ. ಕುಮಾರಗುರು ತಂತ್ರಿಯವರ ಮೂಲಕ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲಾಗಿತ್ತು.
ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿ ದಂಪತಿಗಳು, ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕೆ.ಪಿ. ಕುಮಾರಗುರು ತಂತ್ರಿ ದಂಪತಿಗಳು, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿ ದಂಪತಿಗಳು, ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಒಂಬತ್ತು ಮಂದಿ ಜೊತೆಗೆ ಗಂಗಾಜಲ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ರಹ್ಮಕಲಶೋತ್ಸವ - ಧಾರ್ಮಿಕ ಸಮಿತಿ ಕಾರ್ಯಾದ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಸದಸ್ಯ ಮಾಧವ ಪಾಲನ್, ಯೋಗೀಶ್ ವಿ. ಶೆಟ್ಟಿ, ಸುಹಾಸ್ ಹೆಗ್ಡೆ ನಂದಳಿಕೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ರಮೇಶ್ ಹೆಗಡೆ ಕಲ್ಯ, ಅರುಣ್ ಶೆಟ್ಟಿ ಪಾದೂರು, ಶ್ರೀಕರ ಶೆಟ್ಟಿ ಕಲ್ಯ, ಹರೀಶ್ ನಾಯಕ್ ಕಾಪು, ರವಿ ಸುಂದರ ಶೆಟ್ಟಿ, ಪುಣೆ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲ್ ಬೆಟ್ಟು, ಉದಯ ಸುಂದರ ಶೆಟ್ಟಿ, ಕಾಪು ದಿವಾಕರ ಶೆಟ್ಟಿ, ಹರಿಯಪ್ಪ ಕೋಟ್ಯಾನ್, ಸುಗ್ಗಿ ಸುಧಾಕರ ಶೆಟ್ಟಿ, ರೋಷನ್ ಕುಮಾರ್ ಶೆಟ್ಟಿ, ಸಂದೀಪ್ ಶೆಟ್ಟಿ ಮುಂಬಯಿ, ಗೀತಾಂಜಲಿ ಸುವರ್ಣ, ಶಾಂತಲತಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಮೆರವಣಿಗೆಯಲ್ಲಿ ಭಜನಾತಂಡಗಳು, ಚೆಂಡೆ ಬಳಗ, ಮಹಿಳೆಯರು, ಪುರುಷರ ಸರತಿ ಸಾಲು ಮೆರವಣಿಗೆಗೆ ಮೆರುಗು ತಂದಿತು.