ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬೆಳ್ಳೆ ಗ್ರಾ.ಪಂ.ಪರಿಸರದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

Posted On: 06-03-2025 09:01PM

ಶಿರ್ವ : ಬೆಳ್ಳೆ ಗ್ರಾಮ ಪಂಚಾಯತ್ ಬೆಳ್ಳೆ, ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನಿಟ್ಟೆ ಇದರ "ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ-2025" ಬೆಳ್ಳೆಯಲ್ಲಿ ಜರುಗುತ್ತಿದ್ದು, ಬುಧವಾರ ವಿದ್ಯಾರ್ಥಿಗಳು ಬೆಳ್ಳೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.

ಪರಿಸರ ಸ್ವಚ್ಛತಾ ಸೇವೆಗಾಗಿ ಶಿಬಿರಾರ್ಥಿಗಳನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಶಿಬಿರಾಧಿಕಾರಿಗಳು, ಸಂಸ್ಥೆಯ ಉಪನ್ಯಾಸಕರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಿಬ್ಬಂದಿವರ್ಗ,ಆರೋಗ್ಯ ಇಲಾಖೆ ಕಾರ್ಯಕರ್ತರು, ಎಸ್‌ಎಲ್‌ಆರ್‌ಎಮ್ ಕಾರ್ಯಕರ್ತರು ಉಪಸ್ಥಿತರಿದ್ದರು.