ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ
Posted On:
16-03-2025 10:45AM
ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ದೇವಳದ ವತಿಯಿಂದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಪ್ರಹ್ಲಾದ್ ಜೋಶಿ ದಂಪತಿಯನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ದೇವಳದ ಪ್ರಧಾನ ಅರ್ಚಕ ಶ್ರೀಧರ ತಂತ್ರಿಯವರು ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ಈ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ದೇವಸ್ಥಾನವು ಭಕ್ತಾದಿಗಳ ದೇಣಿಗೆಯಿಂದ ಅತ್ಯಧ್ಭುತವಾಗಿ ಮೂಡಿ ಬಂದಿದೆ. ದೈವ ಭಕ್ತನಾದ ನಾನು ಅತ್ಯಂತ ಭಕ್ತಿಯಿಂದ ಇಲ್ಲಿಗೆ ಬಂದಿದ್ದೇನೆ ಎಂದರು.
ಕೇಂದ್ರ ಅಥವಾ ರಾಜ್ಯ ಸರಕಾರದ ಅನುದಾನ ಬಂದಿಲ್ಲ ಎಂಬ ಪತ್ರಕರ್ತರ ಪ್ರಶ್ನೆಗೆ, ಕೇಂದ್ರ ಸರಕಾರ ನೇರವಾಗಿ ನೀಡಲಾಗದು, ಆದರೆ ರಾಜ್ಯ ಸರಕಾರದ ಮೂಲಕ ಮನವಿ ಬಂದರೆ ನೋಡೋಣ ಎಂದರು.
ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಯೋಗೀಶ್ ವಿ. ಶೆಟ್ಟಿ, ರಮೇಶ್ ಹೆಗಡೆ ಕಲ್ಯ, ಉಡುಪಿ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಶೆಟ್ಟಿ, ಅರುಣ್ ಶೆಟ್ಟಿ ಪಾದೂರು, ಜಿತೇಂದ್ರ ಶೆಟ್ಟಿ, ಗೀತಾಂಜಲಿ ಸುವರ್ಣ, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.