ತುಳುನಾಡ ಕಲಾವಿದರು ಪಡುಬಿದ್ರಿ ವತಿಯಿಂದ 24 ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮ
Posted On:
18-03-2025 10:34AM
ಪಡುಬಿದ್ರಿ : ತುಳುನಾಡ ಕಲಾವಿದರು (ರಿ.) ಪಡುಬಿದ್ರಿ ಇದರ ವತಿಯಿಂದ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ 24ನೇ ವರ್ಷದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಕಲ್ಲಟ್ಟೆ ಶ್ರೀ ಧರ್ಮ ಜಾರಂದಾಯ ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಉದ್ಘಾಟಿಸಿದರು.
ಭಾರತೀಯ ನೌಕದಳದ ನಿವೃತ್ತ ಸೇನಾಧಿಕಾರಿ ನಟರಾಜ್ ಪಿ.ಎಸ್ ಮಾತನಾಡಿ, ಕಲೆ ಹಾಗು ರಂಗಭೂಮಿ ಕಲಿಕೆಯು ಸೃಜನಶೀಲತೆ, ಕಾರ್ಯಕ್ಷಮತೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಆತ್ಮವಿಶ್ವಾಸವನ್ನು ಸುಧಾರಿಸುತ್ತದೆ. ಕಲೆಯು ಜನರಿಗೆ ಮೌಲ್ಯಯುತ ನೀತಿ ಪಾಠವನ್ನು ತಿಳಿಸುವ ಕೊಂಡಿಯಾಗಿದೆ. ಯುವ ಕಲಾವಿದರಿಗೆ ಉತ್ತೇಜನವನ್ನು ನೀಡುವ ಹಾಗೂ ಉತ್ತಮ ಅವಕಾಶವನ್ನು ಕಲ್ಪಿಸುವ ಕೆಲಸ ಕಾರ್ಯಗಳು ಸಂಘ ಸಂಸ್ಥೆಗಳು ಮಾಡಬೇಕಾಗಿದೆ. ಈ ನಿಟ್ಚಿನಲ್ಲಿ ತುಳುನಾಡ ಕಲಾವಿದರು ಮಾಡುತಿರುವ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಸನ್ಮಾನ/ಪ್ರಶಸ್ತಿ ಪ್ರಧಾನ : ಭಾರತೀಯ ನೌಕಾದಳದ ನಿವೃತ್ತ ಸೇನಾಧಿಕಾರಿ ನಟರಾಜ್ ಪಿ.ಎಸ್, ಸಾಮಾಜಿಕ ಹೋರಾಟಗಾರ ಶೇಖರ್ ಹೆಜ್ಮಾಡಿ, ಸಮಾಜ ಸೇವಕ ಕೆ. ಸುರೇಶ್ ಕುಮಾರ್, ರಾಷ್ಟ್ರೀಯ ಅಥ್ಲೆಟಿಕ್ ಶಾಟ್ಪುಟ್ ಕ್ರೀಡಾ ಪಟು ಅನುರಾಗ್ ಜಿ. ರವರನ್ನು ಸನ್ಮಾನಿಸಲಾಯಿತು. 2024-25 ರ ಸಾಲಿನ "ತುಳುನಾಡ ಸಿರಿ ಪ್ರಶಸ್ತಿ"ಯನ್ನು ಕಲಾ ಕ್ಷೇತ್ರದಲ್ಲಿ ಸಾಧನೆಗೈದ ರಂಗಭೂಮಿ ಕಲಾವಿದೆ ಕು.ಯಶೋಧ ಪಡುಬಿದ್ರಿರವರಿಗೆ ನೀಡಿ ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ್ ಪಡುಬಿದ್ರಿ ವಹಿಸಿದ್ದರು.
ಈ ಸಂದರ್ಭದಲ್ಲಿ ರಾಗ್ ರಂಗ್ ಕಲ್ಚರಲ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ವಿಶ್ವಾಸ್ ಅಮೀನ್, ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಗ್ರಾ.ಪಂ.ಸದಸ್ಯ ಗಣೇಶ್ ಕೋಟ್ಯಾನ್, ಓಂಕಾರ ಕಾಸ್ಟ್ಯೂಮ್ಸ್ ಮತ್ತು ಕಲಾ ಸಂಗಮದ ಪಾಲುದಾರೆ ಗೀತಾ ಅರುಣ್, ಸಾಮಾಜಿಕ ಹೋರಾಟಗಾರ ಶೇಖರ್ ಹೆಜ್ಮಾಡಿ, ಕಡಲ್ ಫಿಶ್ ಕ್ರಿಕೆಟರ್ಸ್ ಸಂಸ್ಥೆಯ ಅಧ್ಯಕ್ಷ ಚೇತನ್ ಪಡುಬಿದ್ರಿ, ಶ್ರೀ ಆದಿಶಕ್ತಿ ಮಂತ್ರದೇವತೆ ಮತ್ತು ಕೊರಗಜ್ಜ ಸನ್ನಿಧಾನದ ಧರ್ಮದರ್ಶಿ ಸುಧಾಕರ್ ಸಾಲ್ಯಾನ್, ಪಡುಬಿದ್ರಿ ರೋಟರಿ ನಿಯೋಜಿತ ಅಧ್ಯಕ್ಷ ಸುನಿಲ್ ಕುಮಾರ್, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯ ಅಧ್ಯಕ್ಷ ರಚನ್ ಸಾಲ್ಯಾನ್, ಭಗವತಿ ಫ್ರೆಂಡ್ಸ್ ಗ್ರೂಪ್ ಸ್ಥಾಪಕ ಅಧ್ಯಕ್ಷ ಯುವರಾಜ್ ಕುಲಾಲ್ ಉಪಸ್ಥಿತರಿದ್ದರು.
ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಸಂತೋಷ್ ನಂಬಿಯಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸುಧಾಕರ್ ಕೆ. ವಂದಿಸಿದರು.