ಪಡುಕಳತ್ತೂರು ಪಿಕೆಎಸ್ ಪ್ರೌಢ ಶಾಲೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೊಂದಿಗೆ ಸಂವಾದ
Posted On:
18-03-2025 09:12PM
ಕಾಪು : ಪಡುಕಳತ್ತೂರು ಪಿಕೆಎಸ್ ಪ್ರೌಢ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಭಯ ಹಾಗೂ ಒತ್ತಡ ನಿವಾರಣೆ, ಪರಿಣಾಮಕಾರಿ ಪರೀಕ್ಷಾ ಪೂರ್ವ ಸಿದ್ಧತೆ, ಧನಾತ್ಮಕ ಚಿಂತನೆಯೊಂದಿಗೆ ಆತ್ಮವಿಶ್ವಾಸ ವೃದ್ಧಿಯ ಬಗ್ಗೆ ಕಾಪು ತಾಲೂಕು ಕಸಾಪ ಅಧ್ಯಕ್ಷರು ಹಾಗೂ ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಸಂವಾದ ನಡೆಸಿ ವಿದ್ಯಾರ್ಥಿಗಳಲ್ಲಿ ಉತ್ಸಾಹ ತುಂಬಿದರು.
ಪರೀಕ್ಷೆಯ ದಿನದ ಮೊದಲ ಸಿದ್ಧತೆ, ಪರೀಕ್ಷಾ ಕೊಠಡಿಯಲ್ಲಿ ಹಾಗೂ ಪರೀಕ್ಷೆಯ ಕೊನೆಯಲ್ಲಿ ಗಮನಿಸಬೇಕಾದ ಅಂಶಗಳನ್ನು ತಿಳಿಸಿ ಯಾವುದೇ ಭಯವಿಲ್ಲದೆ ಖುಷಿಯಲ್ಲಿ ಪೂರ್ಣ ಆತ್ಮವಿಶ್ವಾಸದೊಂದಿಗೆ ಪರೀಕ್ಷೆಗೆ ಬರೆಯುವಂತೆ ಮನವರಿಕೆ ಮಾಡಿದರು. ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳಿಸಿದ ಕಾಪು ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ನಗದು ಬಹುಮಾನದೊಂದಿಗೆ ತಾಲೂಕು ಮಟ್ಟದಲ್ಲಿ ಸನ್ಮಾನಿಸಲಾಗುವುದು ಎಂದರು.
ಶಿರ್ವ ರೋಟರಿಯ ಇಂರ‍್ಯಾಕ್ಟ್ ಸಂಸ್ಥೆಗಳಿರುವ ಶಾಲೆಗಳಲ್ಲಿ ನೂರು ಶೇಕಡ ಫಲಿತಾಂಶ ದಾಖಲಿಸಿದ್ದಲ್ಲಿ ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ವಿಶೇಷ ಬಹುಮನ ನೀಡಿ ಅಭಿನಂದಿಸಲಾಗುವುದು ಎಂದರು. ವಿದ್ಯಾರ್ಥಿಗಳು ಮುಕ್ತವಾಗಿ ಸಂವಾದದಲ್ಲಿ ಪಾಲ್ಗೊಂಡರು.
ಶಾಲಾ ಮುಖ್ಯ ಶಿಕ್ಷಕ ಗಂಗಾ ನಾಯ್ಕ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಹಶಿಕ್ಷಕ ಚಂದ್ರಕಾಂತ್ ಮಾನೆ ನಾಯ್ಕ್ ವಂದಿಸಿದರು. ವೇದಿಕೆಯಲ್ಲಿ ಶಿಕ್ಷಕಿಯರಾದ ಸಂಗೀತಾ, ಕು.ಕಾವ್ಯಾ ಉಪಸ್ಥಿತರಿದ್ದರು.