ಮಾ.25ರಂದು ಕಾಪು ಶ್ರೀ ಹಳೆ ಮಾರಿಯಮ್ಮ ದೇವಸ್ಥಾನದಲ್ಲಿ ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನಕ್ಕೆ ಚಾಲನೆ
Posted On:
23-03-2025 05:34PM
ಕಾಪು : ಮಾರ್ಚ್ 25 ಮಂಗಳವಾರ ಸುಗ್ಗಿ ಜಾತ್ರೆಯ ಪರ್ವಕಾಲದಂದು “ಕಾಪು ಶ್ರೀ ಹಳೇ ಮಾರಿಯಮ್ಮ ಸನ್ನಿಧಾನ ಜೀರ್ಣೋದ್ಧಾರ ಮಹಾ ಸಂಕಲ್ಪ" ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿಯಾಗಿ ರಾತ್ರಿ 9.30 ಗಂಟೆಗೆ ಶ್ರೀ ದೇವಳದ ಮುಂಭಾಗದ ವೇದಿಕೆಯಲ್ಲಿ "ಜೀರ್ಣೋದ್ದಾರ ಮೂಲನಿಧಿ ಸಮರ್ಪಣಾ ಮಹಾ ಅಭಿಯಾನ ಪ್ರಾರಂಭ ಸಂಬಂಧಿ "ಸಭಾ ಕಾರ್ಯಕ್ರಮ - ಜೀರ್ಣೋದ್ಧಾರ ಲಾಂಛನ ಅನಾವರಣ", ಸಮಸ್ತ ಭಕ್ತರಿಗೆ ಕಾಣಿಕೆ ಡಬ್ಬಿ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಪ್ರಸಾದ್ ಜಿ ಶೆಣೈ ಹೇಳಿದ್ದಾರೆ.
ಅವರು ಶನಿವಾರ ಕಾಪು ಹಳೆಮಾರಿಯಮ್ಮ ದೇವಸ್ಥಾನದ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾಪು ಶ್ರೀ ಹಳೆ ಮಾರಿಯಮ್ಮನ ದೇಗುಲ ಜೀರ್ಣೋದ್ಧಾರ ಆಗಬೇಕೆಂದು ಲಕ್ಷಾಂತರ ಭಕ್ತರ ಬಹು ಕಾಲದ ಕನಸಾಗಿದ್ದು, ಶ್ರೀ ದೇವಿಯ ಸಮ್ಮುಖ ಊರಿನ ಗುರು ಹಿರಿಯರ, ಗಣ್ಯರ, ಸಮಸ್ತ ಭಕ್ತಾಧಿಗಳ ಸಹಭಾಗಿತ್ವದಲ್ಲಿ ಇದಕ್ಕೆ ಮುನ್ನುಡಿ ಇಡಲಾಗುತ್ತಿದೆ.
ಅಂದು ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಾಪು ಶ್ರೀ ವೆಂಕಟರಮಣ ಹಾಗೂ ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀ ಕೆ ಕಮಲಾಕ್ಷ ಭಟ್, ಧಾರ್ಮಿಕ ವಿದ್ವಾಂಸರು, ಪ್ರಸಿದ್ದ ಪಂಚಾಂಗಕರ್ತರು ಹಾಗೂ ಶ್ರೀ ವೆಂಕಟರಮಣ ದೇವಸ್ಥಾನದ ತಂತ್ರಿಗಳಾದ ಡಾ. ಎಂ. ಪಂಡಿತ್ ನರಸಿಂಹ ಆಚಾರ್ಯ ಮಂಗಳೂರು ಉಪಸ್ಥಿತರಿರುವರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಕಾಪು ಇದರ ಮಾಜಿ ಅಧ್ಯಕ್ಷ ಗೋಕುಲ್ದಾಸ್ ಆನಂದ್ರಾಯ ಶೆಣೈ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಲಾಲಾಜಿ ಅರ್ ಮೆಂಡನ್, ಜಿ.ಎಸ್.ಬಿ. ಸರ್ವ ದೇವಳಗಳ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವಾ ಮುಲ್ಕಿ, ಕಾಪು ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಆಡಳಿತ ಮೊಕೇಸರ ಮನೋಹರ್ ಶೆಟ್ಟಿ, ಕಾಪು ಶ್ರೀ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ, ಕಾಪು ಬಿಲ್ಲವ ಸಂಘದ ಅಧ್ಯಕ್ಷ ವಿಕ್ರಮ್ ಕಾಪು, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಮಾಜಿ ಆಡಳಿತ ಮೊಕೇಸರ ಮೋಹನ್ ಬಂಗೇರ, ಕಾಪು ಶ್ರೀ ವೆಂಕಟರಮಣ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿ ಕೆ. ಲಕ್ಷ್ಮೀನಾರಾಯಣ ನಾಯಕ್ ಕಾಪು, ಡಾ. ಕೆ. ನಾಗಾನಂದ ಭಟ್ ಉಪಸ್ಥಿತರಿರುವರೆಂದು ಪ್ರಸಾದ್ ಶೆಣೈ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸಹ ಮೊಕ್ತೇಸರರಾದ ಸದಾಶಿವ ಕಾಮತ್, ರಾಮ ನಾಯಕ್, ಶ್ರೀಕಾಂತ್ ಭಟ್, ರಾಜೇಶ್ ಎಂ ಶೆಣೈ, ಸದಸ್ಯರಾದ ಮೋಹನದಾಸ್ ಕಿಣಿ, ಸುನಿಲ್ ಪೈ, ಚಂದ್ರಕಾಂತ್ ಕಾಮತ್, ಕೃಷ್ಣಾನಂದ ನಾಯಕ್ ಮತ್ತು ರಾಜೇಶ್ ಶೆಣೈ ಉಪಸ್ಥಿತರಿದ್ದರು.