ಪಾಜಕ ಶ್ರೀವಿಶ್ವೇಶತೀರ್ಥ ಮಹಾವಿದ್ಯಾಲಯ -ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
Posted On:
25-03-2025 02:35PM
ಶಿರ್ವ : ಕುಂಜಾರುಗಿರಿ ಸಮೀಪದ ಪಾಜಕ ಶ್ರೀವಿಶ್ವೇಶತೀರ್ಥ ಮಹಾವಿದ್ಯಾಲಯದ ಎನ್‌ಎಸ್‌ಎಸ್ ಘಟಕ, ಜೆಸಿಐ ಕಟಪಾಡಿ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಕಾಲೇಜಿನ ಪ್ರಾಚಾರ್ಯ ವಿಜಯ್ ಪಿ.ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಚಿತವಾಗಿ ಇಂತಹ ಕಾರ್ಯಕ್ರಮಗಳನ್ನು ಮಾಡುವುದರಿಂದ ಅಶಕ್ತರಿಗೆ ಹೆಚ್ಚಿನ ಪ್ರಯೋಜನವಾಗುವುದು. ವಿದ್ಯಾರ್ಥಿಗಳಲ್ಲಿ ರಕ್ತದಾನದ ಅರಿವು ಮೂಡಿಸುವುದರಜೊತೆಗೆ ಇತ್ತೀಚಿನ ದಿನಗಳಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿರುವುದರಿಂದ ಅಗತ್ಯ ಇರುವ ರೋಗಿಗಳಿಗೆ ಇದರ ಸದುಪಯೋಗ ಆಗುವಲ್ಲಿ ಸಹಕಾರಿಯಾಗಲಿದೆ ಎಂದರು.
ಶಿಬಿರದಲ್ಲಿ ಮಹಿಳೆಯರ ಉಚಿತ ಆರೋಗ್ಯ ತಪಾಸಣೆ, ಕೀಲು, ಮೂಳೆ ತಪಾಸಣೆ, ಮಧುಮೇಹ, ಕಣ್ಣಿನ ಆರೋಗ್ಯ ತಪಾಸಣೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಆನಂದತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಕೋಶಾಧಿಕಾರಿ ಲಕ್ಷ್ಮೀನಾರಾಯಣ ಉಪಾಧ್ಯ, ಸದಸ್ಯರಾದ ಸುದರ್ಶನ್ ರಾವ್, ಆನಂದತೀರ್ಥ ವಿದ್ಯಾಲಯದ ಪ್ರಾಂಶುಪಾಲೆ ಡಾ.ಗೀತಾ ಎಸ್.ಕೋಟ್ಯಾನ್, ಉಡುಪಿ ಸಿಎಸ್‌ಐ ಲಾಂಬರ್ಡ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಗಣೇಶ್ ನಾಯಕ್, ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಘಟಕದ ಡಾ,ವೀಣಾ ಕುಮಾರಿ, ಕಟಪಾಡಿ ಜೆಸಿಐ ಅಧ್ಯಕ್ಷೆ ರಂಜಿತಾ ಶೇಟ್, ವಲಯ ಸಂಯೋಜಕ ಪ್ರಶಾಂತ್ ಆರ್,ಎಸ್, ಪದವಿ ಕಾಲೇಜು ಸಂಯೋಜಕಿ ರಕ್ಷಿತಾ, ಕಾಲೇಜು ಎನ್‌ಎಸ್‌ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಪೂಜಾ ಉಪಸ್ಥಿತರಿದ್ದರು.
170ಕ್ಕೂ ಅಧಿಕ ಜನ ಶಿಬಿರದ ಪ್ರಯೋಜನ ಪಡೆದುಕೊಂಡರು. 62 ಯುನಿಟ್ ರಕ್ತ ಸಂಗ್ರಹವಾಗಿದೆ.