ಮಟ್ಟಾರು : ಉಚಿತ ನೇತ್ರ ತಪಾಸಣೆ ; ಆರೋಗ್ಯ ಮಾಹಿತಿ ಮತ್ತು ದಂತ ತಪಾಸಣಾ ಶಿಬಿರ
Posted On:
25-03-2025 02:56PM
ಶಿರ್ವ : ಶಿರ್ವ ಮಟ್ಟಾರು ವಿಶ್ವಹಿಂದು ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ಇದರ ನೇತೃತ್ವದಲ್ಲಿ ಡಾ.ವಿ.ಎಸ್.ಆಚಾರ್ಯ ಬಯಲು ರಂಗಮಂದಿರದಲ್ಲಿ ಜಿಲ್ಲಾ ಆರೋಗ್ಯ ಸೊಸೈಟಿ, ಅಂಧತ್ವ ನಿಯಂತ್ರಣ ವಿಭಾಗ ಉಡುಪಿ, ಸಂಚಾರಿ ನೇತ್ರಘಟಕ ಜಿಲ್ಲಾಸ್ಪತ್ರೆ ಉಡುಪಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಉಪ ಆರೋಗ್ಯ ಕೇಂದ್ರ ಮಟ್ಟಾರು ಇವರ ಸಹಭಾಗಿತ್ವದಲ್ಲಿ ಉಚಿತ ನೇತ್ರ ತಪಾಸಣೆ, ಗ್ಲಾಕೋಮಾ ಕಾಯಿಲೆ ಬಗ್ಗೆ ಮಾಹಿತಿ, ಉಚಿತ ದಂತ ಚಿಕಿತ್ಸಾ ಶಿಬಿರ,ಮಧುಮೇಹ, ರಕ್ತದೊತ್ತಡ ತಪಾಸಣೆ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾಸ್ಪತ್ರೆಯ ಹಿರಿಯ ನೇತ್ರತಜ್ಞರಾದ ಡಾ. ನಿತ್ಯಾನಂದ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿ, ಶಿಬಿರದ ಉದ್ದೇಶ ಮತ್ತು ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಮಟ್ಟಾರು ಬಬ್ಬರ್ಯ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ವಹಿಸಿದ್ದರು. ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯ ನೇತ್ರತಜ್ಙ ಡಾ.ಫಾಯಲ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ದಂತ ಆರೋಗ್ಯಾಧಿಕಾರಿ ಡಾ.ಗಾಯತ್ರಿ ಸಂತೋಷ್, ಮಟ್ಟಾರು ಆರೋಗ್ಯ ಸಮುದಾಯ ಆರೋಗ್ಯಾಧಿಕಾರಿ ಮಾನಸಾ ಜೆ, ಆರೋಗ್ಯ ಸುರಕ್ಷಾಧಿಕಾರಿ ಗೀತಾ, ಶಿರ್ವ ಗ್ರಾ.ಪಂ ಸದಸ್ಯ ದೇವದಾಸ್ ನಾಯಕ್, ಮಮತಾ ಶೆಟ್ಟಿ, ಮಟ್ಟಾರು ವಿ.ಹಿಂ.ಅಧ್ಯಕ್ಷ ಜಗದೀಶ ಆಚಾರ್ಯ, ವೇದಿಕೆಯಲ್ಲಿದ್ದರು.
ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಶಿಬಿರಕ್ಕೆ ಭೇಟಿ ನೀಡಿ ಸಂಘಟನೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಆರೋಗ್ಯ ಕೇಂದ್ರ ಹಾಗೂ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂಧಿಗಳು, ಆಶಾ ಕಾರ್ಯಕರ್ತೆಯರು ಸಹಕರಿಸಿದರು. ಸಂಘಟನೆಯ ಕಾರ್ಯಕರ್ತರು ಸಕ್ರೀಯವಾಗಿ ಭಾಗವಹಿಸಿದ್ದರು. 150 ಕ್ಕೂ ಅಧಿಕ ಗ್ರಾಮಸ್ಥರು ಶಿಬಿರದ ಪ್ರಯೋಜನವನ್ನು ಪಡೆದರು.