ಕಾಪು ಶ್ರೀ ಹೊಸ ಮಾರಿಗುಡಿಗೆ ಮುಂಬೈ ಪೊಲೀಸ್ ಆಡಳಿತಾಧಿಕಾರಿ ಭೇಟಿ
Posted On:
30-03-2025 10:19AM
ಕಾಪು : ಮುಂಬೈ ಪೊಲೀಸ್ ಆಡಳಿತಾಧಿಕಾರಿ ಜಯಕುಮಾರ್ ಐ. ಪಿ. ಎಸ್ ಅವರು ಸ್ನೇಹಿತರೊಂದಿಗೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಅಮ್ಮನ ದರುಶನ ಪಡೆದು ಅನುಗ್ರಹ ಪ್ರಸಾದ ಸ್ವೀಕರಿಸಿದರು.
ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರು ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಉದಯ ಸುಂದರ್ ಶೆಟ್ಟಿಯವರು ದೇವಳದ ಜೀರ್ಣೋದ್ಧಾರ ಮತ್ತು ವಾಸ್ತುಶಿಲ್ಪದ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕರಾದ ಶೋಭಾ ರಮೇಶ್ ಶೆಟ್ಟಿ ಮತ್ತು ಸುನಿತಾ ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು.