ಕಾಪು : ಯುವಸೇನೆ ಮಡುಂಬು ವೈ.ಎಸ್.ಎಮ್ ಫ್ರೆಂಡ್ಸ್ ಮಡುಂಬು ಇದರ 18ನೇ ವಾರ್ಷಿಕೋತ್ಸವ ಮೇ 06, ಮಂಗಳವಾರ ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ಜರಗಲಿದೆ.
ರಾತ್ರಿ ಗಂಟೆ 8 ರಿಂದ ಸಭಾ ಕಾರ್ಯಕ್ರಮವು ಯುವಸೇನೆ ಮಡುಂಬು ಇದರ ಅಧ್ಯಕ್ಷರಾದ
ದೀಪಕ್ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ.
ಉದ್ಘಾಟನೆ ಹಾಗೂ ಭಗವದ್ಗಿತಾ ದಿಕ್ಸೂಚಿ ಭಾಷಣವನ್ನು ಜ್ಯೋತಿಷಿ ಮತ್ತು ಪುರೋಹಿತರಾದ
ವಿದ್ವಾನ್ ಕೆ.ಪಿ. ಶ್ರೀನಿವಾಸ ತಂತ್ರಿ ಮಾಡಲಿದ್ದು,
ಮುಖ್ಯ ಅತಿಥಿಗಳಾಗಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಶಾಂತ ಇಲೆಕ್ಟ್ರಿಕಲ್ಸ್, ಉಡುಪಿ
ಆಡಳಿತ ನಿರ್ದೇಶಕರಾದ ಶ್ರೀಪತಿ ಭಟ್, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಪತ್ರಕರ್ತ ರಾಕೇಶ್ ಕುಂಜೂರು, ಫ್ರೆಂಡ್ಸ್ ಕೆಟರರ್ಸ್ ಶಂಕರಪುರ ಮಾಲಕರಾದ ನವೀನ್ ಅಮೀನ್, ಉದ್ಯಮಿ ದಿನೇಶ್ ಶೆಟ್ಟಿ, ಕಲ್ಯಾಲು, ಕಾಂಗ್ರೆಸ್ ಮುಖಂಡರಾದ ಸುನಿಲ್ ಬಂಗೇರ ಉಪಸ್ಥಿತರಿರಲಿದ್ದಾರೆ.
ಸಂಜೆ ಗಂಟೆ 6 ರಿಂದ 8 ರವರೆಗೆ ಸ್ಥಳೀಯ ಪ್ರತಿಭೆಗಳಿ೦ದ ಸಾಂಸ್ಕೃತಿಕ ಕಾರ್ಯಕ್ರಮವು ಜರಗಲಿದೆ. ರಾತ್ರಿ ಗಂಟೆ 8ಕ್ಕೆ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ ತುಳು ಚಾರಿತ್ರಿಕ ನಾಟಕ ಛತ್ರಪತಿ ಶಿವಾಜಿ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.