ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಹಾಗೂ ಕನ್ನಡ, ಸಂಸ್ಕೃತಿ ಇಲಾಖೆ ಉಡುಪಿ : ಪ್ರಸಾದನ ಕಾರ್ಯಗಾರ ಸಂಪನ್ನ
Posted On:
31-03-2025 09:33PM
ಉಡುಪಿ : ಶ್ರೀ ಭ್ರಾಮರಿ ನಾಟ್ಯಾಲಯ ಅಮ್ಮುಂಜೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಪ್ರಸಾದನ ಕಾರ್ಯಗಾರ ಜರುಗಿತು.
ಕಾರ್ಯಾಗಾರದ ಉದ್ಘಾಟನೆಯನ್ನು ಉಪ್ಪೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂದೀಪ್ ಶೆಟ್ಟಿ ನೆರವೇರಿಸಿ ನೃತ್ಯ ಕಲಾವಿದರಿಗೆ ಪ್ರಸಾದನ ಕಾರ್ಯಗಾರವೆನ್ನುವುದು ಕಲಾ ಪ್ರದರ್ಶನಕ್ಕೆ ಪೂರಕ ಅಂಶಗಳು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಸಾದನ ಕಾರ್ಯಗಾರವನ್ನು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಆರ್ ಕೆ ಕಲಾ ತಂಡಗಳ ನಿರ್ದೇಶಕರು, ಬಹುಮುಖ ಪ್ರತಿಭೆಯ ಸಂಪನ್ಮೂಲ ವ್ಯಕ್ತಿ ರಾಜೇಶ್ ವಿಟ್ಲ ಅವರು ಭರತ ನಾಟ್ಯ ಮುಖವರ್ಣಿಕೆ, ಕೇಶ ವಿನ್ಯಾಸ, ವಸ್ತ್ರ ವಿನ್ಯಾಸದ ಬಗ್ಗೆ ವಿವರಣೆ ಹಾಗು ಪ್ರಾತ್ಯಕ್ಷಿಕೆ ಯೊಂದಿಗೆ ಬಹಳ ಉತ್ತಮ ರೀತಿಯಲ್ಲಿ ಶಿಬಿರಾರ್ಥಿಗಳಿಗೆ ಅರ್ಥವಾಗುವ ರೀತಿಯಲ್ಲಿ ನಡೆಸಿಕೊಟ್ಟರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ರಂಗ ನಿರ್ದೇಶಕರು, ಖ್ಯಾತ ನಿರೂಪಕರಾದ ಯೋಗೀಶ್ ಕೊಳಲಗಿರಿ, ನಾಟ್ಯಾಲಯದ ನೃತ್ಯ ಗುರುಗಳು ನಿರ್ದೇಶಕರು ಆಗಿರುವ ಭವಾನಿಶಂಕರ್ ಉಪಸ್ಥಿತರಿದ್ದರು.
ಸುಮಾರು 80 ಶಿಬಿರಾರ್ಥಿಗಳು ಭಾಗವಹಿಸಿದ್ದ ಕಾರ್ಯಾಗಾರದಲ್ಲಿ ಪೋಷಕರು ಕೂಡ ಭಾಗವಹಿಸಿ ಕಾರ್ಯಾಗಾರದ ಪ್ರಯೋಜನ ಪಡೆದುಕೊಂಡರು. ಕಾರ್ಯಗಾರವನ್ನು ನೆರವೇರಿಸಿ ಕೊಟ್ಟ ಸಂಪನ್ಮೂಲ ವ್ಯಕ್ತಿ ರಾಜೇಶ್ ವಿಟ್ಲರವರನ್ನು ಸನ್ಮಾನಿಸಲಾಯಿತು.
ಶ್ರೀ ಭ್ರಾಮರಿ ನಾಟ್ಯಾಲಯದ ಗುರುಗಳಾದ ಭವಾನಿಶಂಕರ್ ಸ್ವಾಗತಿಸಿ , ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.