ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಪ್ರಸನ್ನ ಪಿ.ಎಸ್ ರವರಿಗೆ ಮುಖ್ಯಮಂತ್ರಿ ಪದಕ ಗೌರವ

Posted On: 31-03-2025 09:44PM

ಪಡುಬಿದ್ರಿ : ಕರ್ನಾಟಕ ಸರಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ 197 ಪೋಲಿಸ್ ಅಧಿಕಾರಿಗಳನ್ನು ಘೋಷಿಸಿದ್ದು, ಪ್ರಶಸ್ತಿ ಪುರಸ್ಕೃತರಲ್ಲಿ ಪೋಲಿಸ್ ಇಲಾಖೆಯಲ್ಲಿ ಅಧಿಕಾರಿಯಾಗಿ ಕಾರ್ಕಳ , ಮಂಗಳೂರು ವಿವಿಧ ಕಡೆಗಳಲ್ಲಿ ಪ್ರಾಮಾಣಿಕ ಹಾಗು ನಿಷ್ಠೆಯಿಂದ ದಕ್ಷ ಅಧಿಕಾರಿಯಾಗಿ ಸೇವೆಗೃೆದು ಪ್ರಸ್ತುತ ಪಡುಬಿದ್ರಿ ಪೋಲಿಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಅಗಿರುವ ಪ್ರಸನ್ನ ಪಿ.ಎಸ್ ರವರು ಭಾಜನರಾಗಿದ್ದಾರೆ.

ಎಪ್ರಿಲ್ 2 ರಂದು ಬೆಂಗಳೂರು ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.