ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಶ್ರೀ ಹೊಸ ಮಾರಿಗುಡಿಗೆ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರ ಭೇಟಿ

Posted On: 31-03-2025 09:50PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ದೇವಸ್ಥಾನಕ್ಕೆ ಆಗಮಿಸಿದ್ದ ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಲತಾ ಅವರು ಅಮ್ಮನ ದರುಶನ ಪಡೆದು ನವದುರ್ಗಾ ಲೇಖನ ಯಜ್ಞದ ಪುಸ್ತಕವನ್ನು ಪಡೆದಿದ್ದರು.

ಪುಸ್ತಕದಲ್ಲಿ ನವದುರ್ಗಾ ಲೇಖನವನ್ನು 9 ದಿನಗಳವರೆಗೆ ಬರೆದು "ಕಾಪುವಿನ ಅಮ್ಮನ ಮಕ್ಕಳು" ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.