ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆ : ಜಯಭೇರಿ ಬಾರಿಸಿದ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ
Posted On:
27-04-2025 07:38PM
ಪಡುಬಿದ್ರಿ : ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಗಳಿಸಿದೆ.
ಈ ಸಲುವಾಗಿ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿಯವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಡುಬಿದ್ರಿ ರೋಟರಿ ಪೂರ್ವ ಅಧ್ಯಕ್ಷ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ರೌನಕ್ ಪುತ್ರನ್ ಪಡುಬಿದ್ರಿ ಉಪಸ್ಥಿತರಿದ್ದರು.