ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇನ್ನಂಜೆ ಮಹಿಳಾ ಮಂಡಳಿ ವಾರ್ಷಿಕೋತ್ಸವದ ಸಂಭ್ರಮಾಚರಣೆ : ಸ್ವರ್ಗ ಆಶ್ರಮ ಭೇಟಿ

Posted On: 03-05-2025 01:10PM

ಕಾಪು : ಇನ್ನಂಜೆ ಮಹಿಳಾ ಮಂಡಳಿ ಇನ್ನಂಜೆ ಇದರ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನು ಕೊಳಲಗಿರಿಯಲ್ಲಿರುವ ಹೊಂ ಡಾಕ್ಟರ್ ಫೌಂಡೇಶನ್ ಟ್ರಸ್ಟ್ ನ ಸ್ವರ್ಗ ಆಶ್ರಮದ ನಿವಾಸಿಗಳಿಗೆ ರೂ. ಹತ್ತು ಸಾವಿರ ನಗದು ಹಾಗೂ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೋಂ ಡಾಕ್ಟರ್ ಫೌಂಡೇಶನ್ ನ ಅಧ್ಯಕ್ಷರಾರ ಡಾ. ಶಶಿಕಿರಣ್ ಶೆಟ್ಟಿ, ಇನ್ನಂಜೆ ಮಹಿಳಾ ಮಂಡಳಿಯ ಗೌರವಾಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿ, ಮಹಿಳಾ ಮಂಡಳಿ ಅಧ್ಯಕ್ಷರಾದ ಶ್ವೇತಾ ಎಲ್ ಶೆಟ್ಟಿ, ಜೊತೆ ಕಾರ್ಯದರ್ಶಿ ಅನಿತಾ ಮಥಾಯಸ್ ಹಾಗೂ ಮಹಿಳಾ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಪುಷ್ಪ ರವೀಂದ್ರ ಶೆಟ್ಟಿಯವರ ಹುಟ್ಟು ಹಬ್ಬದವನ್ನು ಆಶ್ರಮದಲ್ಲಿ ಆಚರಿಸಲಾಯಿತು.