ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿತ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ
Posted On:
14-05-2025 05:14PM
ಕಾಪು : ನಗರ ಹಾಗೂ ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂದಿತ ವಿವಿಧ ಸಮಸ್ಯೆಗಳ ಬಗ್ಗೆ ಬುಧವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಸ್ಥಳಿಯ ಯೋಜನ ಪ್ರದೇಶದ ಹೊರಭಾಗದಲ್ಲಿನ 1 ಎಕರೆಗಿಂತ ಕಡಿಮೆ ಇರುವ ಪ್ರದೇಶ ಮತ್ತು ಎಕನಿವೇಶನ ವಸತಿ/ವಸತಿಯೇತರ ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ಈ ಹಿಂದೆ ಗ್ರಾಮ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಗಳಲ್ಲಿ ಅನುಮೋದನೆಯನ್ನು ನೀಡಲಾಗುತ್ತಿತ್ತು. 2024 ರಿಂದ ಸದ್ರಿ ಅಧಿಕಾರವನ್ನು ನಗರ ಗ್ರಾಮಾಂತರ ಯೋಜನಾ ಇಲಾಖೆಗೆ ನೀಡಿದ್ದರಿಮದ ಸಾರ್ವಜನಿಕರಿಗೆ ಸಕಾಲದಲ್ಲಿ ವಿನ್ಯಾಸ ಅನುಮೋದನೆಯನ್ನು ಪಡೆಯಲಾಗುತ್ತಿಲ್ಲ. ಇದರಿಂದಾಗಿ ವಿಳಂಬವಾಗುತ್ತಿದೆ.
9&11ಎ ಅನ್ನು ಸಾರ್ವಜನಿಕರಿಗೆ ಪಡೆಯಲು ವಿಳಂಬವಾಗುತ್ತಿದೆ. ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ವಹಿಸಿದ್ದರಿಂದ ಸಿಬ್ಬಂದಿ ಹಾಗೂ ಅಧಿಕಾರಿಗಳ ಕೊರತೆಯಿಂದ ವಿನ್ಯಾಸ ಅನುಮೋದನೆಯನ್ನು ಪಡೆಯಲು ಕನಿಷ್ಠ 2 ರಿಂದ 3 ತಿಂಗಳು ಬೇಕಾಗುದರಿಂದ ಸಾರ್ವಜನಿಕರಿಗೆ ಅನಾನುಕೂಲತೆಯಾಗಿರುತ್ತದೆ. ಈ ಹಿಂದೆ ಗ್ರಾಮ ಹಾಗೂ ತಾಲೂಕು ಪಂಚಾಯತ ನಲ್ಲಿ 15 ದಿನದ ವಿನ್ಯಾಸ ಅನುಮೋದನೆಯೊಂದಿಗೆ 9&11ಎ ಅನ್ನು ಸಾರ್ವಜನಿಕರಿಗೆ ಶೀಘ್ರದಲ್ಲಿ ಪಡೆಯಲು ಸಾದ್ಯವಾಗುತ್ತಿತ್ತು. ಅತೀ ದೂರದ ಗ್ರಾಮೀಣ ಪ್ರದೇಶಗಳಿಗೆ ಸಕಾಲದಲ್ಲಿ ಕ್ಷೇತ್ರ ಭೇಟಿ ನೀಡಲು ನಗರ ಹಾಗೂ ಗ್ರಾಮಾಂತರ ಯೋಜನ ಪ್ರಾಧಿಕಾರಿಗಳ ಅಧಿಕಾರಿಗಳಿಗೆ ಸಾದ್ಯವಾಗದೇ ಇದ್ದು, ಅಲ್ಲದೆ ದಾಖಲೆಗಳ ನೆಪವೊಡ್ಡಿ ಕಡತಗಳ ವಿಲೆಯಲ್ಲಿ ವಿಳಂಬತೆಯನ್ನು ತೋರುತ್ತಿರುದರಿಂದ ಸಾರ್ವಜನಿಕರಿಗೆ ತೊಂದರೆ ಹಾಗೂ ಜನ ಪ್ರತಿನಿಧಿಗಳಿಗೆ ಪ್ರತಿ ನಿತ್ಯ ಸಾರ್ವಜನಿಕರಿಂದ ದುರುಗಳು ಬರುತ್ತಿದೆ. ಕಾಪು ತಾಲೂಕು ವ್ಯಾಪ್ತಿಯಲ್ಲಿ 16 ಗ್ರಾಮ ಪಂಚಾಯಿತಿಗಳು ಇದ್ದು ಸದ್ರಿ ಗ್ರಾಮ ಪಂಚಾಯತ್ ಗೆ ಸಂಬಂದಿಸಿದಂತೆ ಸಾಕಷ್ಟು ಕಡತಗಳು ಕಾಪು ಯೋಜನ ಪ್ರಾಧಿಕಾರದಲ್ಲಿ ವಿನ್ಯಾಸ ಅನುಮೋದನೆ ಅವಶ್ಯಕತೆಯಿದ್ದು ಸದಸ್ಯ ಕಾರ್ಯದರ್ಶಿರವರಿಗೆ ಕಾಪು ತಾಲೂಕು ಅಲ್ಲದೆ ಕಾರ್ಕಳ ಹಾಗೂ ಬಂಟ್ವಾಳ ತಾಲೂಕಿಗೆ ಹೆಚ್ಚುವರಿ ಪ್ರಭಾರವಹಿಸಿದ್ದರಿಂದ ಕಾಪು ತಾಲೂಕು ವ್ಯಾಪ್ತಿಯಲ್ಲಿನ ಏಕ ವಿನ್ಯಾಸ ಕಡತಗಳು ಸುಮಾರು 3 ತಿಂಗಳ ವರೆಗೆ ವಿಲೇ ಯಾಗದೇ ಇರುವುದರಿಂದ 9&11ಎ ಅನ್ನು ಸಾರ್ವಜನಿಕರಿಗೆ ಶೀಘ್ರದಲ್ಲಿ ಪಡೆಯಲು ಸಾದ್ಯವಾಗುತ್ತಿಲ್ಲ.
ಉಡುಪಿ ಜಿಲ್ಲೆಯಲ್ಲಿ ಗ್ರಾಮ ಠಾಣಾ ಪ್ರಕ್ರಿಯೆ ಇಲ್ಲದೆ ಇದ್ದು ಹೆಚ್ಚಿನವರು ತುಂಡು ಭೂಮಿಯನ್ನು ಹೊಂದಿದವರಾಗಿರುತ್ತಾರೆ. ವಿನ್ಯಾಸ ಅನುಮೋದನೆಯ ಸಂದರ್ಭದಲ್ಲಿ ನಿವೇಶನ ಭೂಪರಿವರ್ತನೆಯಾಗಿದ್ದರೂ ಪ್ರಾಧಿಕಾರದ ನಿಯಮದಂತೆ ರಸ್ತೆಯನ್ನು ಭೂ ಪರಿವರ್ತನೆ ಮಾಡಿ ಪುರಸಭೆ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಪಾರಾಧೀನ ಮಾಡುವಂತೆ ಹಾಗೂ ಗ್ರಾಮಾಂತರ ದಲ್ಲಿ ರಸ್ತೆಯ ಮದ್ಯ ಬಾಗದಿಂದ 25 ಮೀ. ಬಿಟ್ಟು ಕಟ್ಟಡವನ್ನು ನಿರ್ಮಿಸಲು ಕಡ್ಡಾಯಗೊಳಿಸಿದ್ದರಿಂದ ತುಂಡು ಭೂಮಿಯನ್ನು ಹೊಂದಿದ್ದವರಿಗೆ ಇದರಿಂದ ಕಷ್ಟವಾಗುತ್ತಿದ್ದು ಬಗ್ಗೆ ಸರಳೀಕರಿಸುವ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ನಗರ ಹಾಗೂ ಗ್ರಾಮಾಂತರ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.