ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕು ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

Posted On: 19-05-2025 06:17PM

ಕಾಪು : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ - ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಸೋಮವಾರ ಕಾಪು ತಹಸೀಲ್ದಾರ ಕಚೇರಿಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ನಮೋನೆ 57 ಅಡಿಯಲ್ಲಿ ಸಲ್ಲಿಸಿದ 10 ಕಡತಗಳಿಗೆ ಮಂಜೂರಾತಿ ನೀಡಲಾಯಿತು.

ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ ಡಾ.ಪ್ರತಿಭಾ ಆರ್., ಅಕ್ರಮ ಸಕ್ರಮ ಸಮಿತಿ ಸದಸ್ಯರುಗಳಾದ ದಿನೇಶ್ ಕೋಟ್ಯಾನ್, ಆನಂದ ಕೊರಂಗ್ರಪಾಡಿ, ಮಾರ್ಗರೇಟ್ ಸೀಮಾ ಡಿಸೋಜಾ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.