ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

1 ಕೋಟಿ ಅನುದಾನದಲ್ಲಿ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ಪ್ರತಿಬಂಧಕ ಕಾಮಗಾರಿಗೆ ಗುದ್ದಲಿ ಪೂಜೆ

Posted On: 20-05-2025 07:08PM

ಪಡುಬಿದ್ರಿ : ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡ್ಸಾಲು - ನಡಿಪಟ್ನ ಕಡಲ ತೀರದಲ್ಲಿ ರಿಪ್ - ರ‍್ಯಾಪ್ ತುರ್ತು ಪ್ರತಿಬಂಧಕ ಕಾಮಗಾರಿಗೆ ಶಾಸಕರ ಶಿಫಾರಸ್ಸಿನ ಮೇರೆಗೆ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಮಂಗಳವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಹೇಮಚಂದ್ರ, ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಹರೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶೋಭಾ, ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಶಾಂತ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.