ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಮೇ.24 : ಅಮೋಘ (ರಿ.) ಉಡುಪಿ ವತಿಯಿಂದ ಸಾಮರಸ್ಯ ಪ್ರಶಸ್ತಿ ಪುರಸ್ಕಾರ

Posted On: 21-05-2025 03:41PM

ಉಡುಪಿ‌ : ಸಾಂಸ್ಕೃತಿಕ -ಸಾಮಾಜಿಕ-ಸಾಹಿತ್ಯಿಕ ಸಂಸ್ಥೆಯಾದ ಅಮೋಘ (ರಿ.) ಉಡುಪಿ ವತಿಯಿಂದ "ಸಾಮರಸ್ಯ ಪ್ರಶಸ್ತಿ ಪುರಸ್ಕಾರ" ಕಾರ್ಯಕ್ರಮ ಮೇ.24, ಶನಿವಾರದಂದು ಸಂಜೆ ಗಂಟೆ 4ಕ್ಕೆ ಉಡುಪಿ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಜರಗಲಿದೆ.

ಶ್ರೀ ಮಾದಾರ ಚೆನ್ನಯ್ಯ ಗುರುಪೀಠ ಚಿತ್ರದುರ್ಗ ಇದರ ಪೀಠಾಧಿಪತಿಗಳಾದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮೀಜಿಯವರು ಪ್ರಶಸ್ತಿ ಪುರಸ್ಕೃತರಾಗಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಖ್ಯಾತ ವಿದ್ವಾಂಸರಾದ ಡಾ|| ಪಾದೆಕಲ್ಲು ವಿಷ್ಣು ಭಟ್ ವಹಿಸಲಿದ್ದು, ಮಾಹೆ, ಮಣಿಪಾಲ ಸಹ ಕುಲಾಧಿಪತಿಗಳಾದ ಡಾ. ಎಚ್. ಎಸ್ ಬಲ್ಲಾಳ್ ಪ್ರಶಸ್ತಿ ಪ್ರದಾನಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತರಾದ ವಾದಿರಾಜ, ಕ.ಸಾ.ಪ. ಉಡುಪಿ ಜಿಲ್ಲಾಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಉಡುಪಿ ಎಂ.ಜಿ.ಎಂ. ಕಾಲೇಜು ಪ್ರಾಂಶುಪಾಲರಾದ ಪ್ರೊ| ಲಕ್ಷ್ಮೀನಾರಾಯಣ ಕಾರಂತ, ಉಡುಪಿ ಎಂ.ಜಿ.ಎಂ. ಕಾಲೇಜು ರಾಜ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ, ಹಿರಿಯ ಲೇಖಕಿ ಪಾರ್ವತಿ ಜಿ. ಐತಾಳ್ ಭಾಗವಹಿಸಲಿದ್ದಾರೆ.

ಸಮಾರಂಭದಲ್ಲಿ ಲೇಖಕಿ ಪೂರ್ಣಿಮಾ ಸುರೇಶ್ ರವರ 2024ರ ಮುದ್ದಣ ಕಾವ್ಯ ಪ್ರಶಸ್ತಿ ಪುರಸ್ಕೃತ ಕೃತಿ ಸಂತೆಯೊಳಗಿನ ಏಕಾಂತ, ಪೂರ್ಣಿಮಾ ಸುರೇಶ್ ರವರ ಪಾರ್ವತಿ ಜಿ. ಐತಾಳ್ ಅನುವಾದಿಸಿರುವ ದಿ ಅಕ್ವೇರಿಯಂ ಕೃತಿ‌ ಬಿಡುಗಡೆಯಾಗಲಿದೆ ಎಂದು ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.