ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪುವಿನಲ್ಲಿ 2025 -26 ನೇ ಸಾಲಿನ ಆರೋಗ್ಯ ರಕ್ಷಾ ಸಮಿತಿಯ ಪ್ರಥಮ ಸಭೆಯು ಜರಗಿತು.
ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ ಇವರು ಅಧ್ಯಕ್ಷತೆ ವಹಿಸಿದ್ದರು.
ಹೊಸದಾಗಿ ನೇಮಕಗೊಂಡ ಸದಸ್ಯರನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಲಾಯಿತು.
ಆಸ್ಪತ್ರೆಯ ವಿವಿಧ ಕಾರ್ಯಕ್ರಮಗಳು, ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರುವ ಬಗ್ಗೆ ರೂಪರೇಷೆಗಳನ್ನು ಚರ್ಚಿಸಲಾಯಿತು.
ಸಭೆಯಲ್ಲಿ ತಾಲೂಕು ಆರೋಗ್ಯ ಅಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಆಡಳಿತ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಸ್ಥಳೀಯ ಪ್ರತಿನಿಧಿಗಳಾದ ಹರೀಶ್ ನಾಯಕ್ ಕಾಪು, ಹಮೀದ್ ಯೂಸುಬ್, ಆಸಿಫ್, ಕಾರ್ತಿಕ್, ಯೋಗೇಶ್, ಆಶಾ ಶಂಕರ್, ಶಾಲಾ ಮುಖ್ಯ ಶಿಕ್ಷಕಿ ಆಶಾಲತಾ, ವೈದ್ಯಾಧಿಕಾರಿ ಡಾ.ಧೃತಿ ಆಳ್ವ, ಸಿಬ್ಬಂದಿಯವರು ಉಪಸ್ಥಿತರಿದ್ದರು.
ಸಿಸ್ಟರ್ ಚಂದ್ರಕಲಾರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.