ಕಾಪು : ನಾಡಪ್ರಭು ಕೆಂಪೇಗೌಡರ ಆದರ್ಶ ಮುಂದಿನ ಪೀಳಿಗೆಗೆ ದಾರಿದೀಪದಂತೆ. ಅವರ ದೂರದೃಷ್ಟಿಯನ್ನು ನಮ್ಮ ಇಂದಿನ ಯುವ ಪೀಳಿಗೆ ಮಾದರಿಯಾಗಿಸಿಕೊಂಡು ದೇಶ ಕಟ್ಟುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಹಶಿಲ್ದಾರ್ ಪ್ರತಿಭಾ ಆರ್ ಕರೆ ನೀಡಿದರು.
ಕಾಪು ತಹಶಿಲ್ದಾರ್ ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈ ಜಯಂತಿಯ ಅಂಗವಾಗಿ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ನಡೆಸಲಾಗಿತ್ತು. ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ನಾಡ ಪ್ರಭು ಕೆಂಪೇಗೌಡರ ಕುರಿತು ಭಾಷಣ ಮತ್ತು ದೇಶಭಕ್ತಿಗೀತೆ ಹಾಡಿದರು.
ಪುರಸಭಾ ಅಧ್ಯಕ್ಷರಾದ ಹರಿಣಾಕ್ಷಿಯವರು ಮಾತನಾಡಿ "ಕೆಂಪೇಗೌಡರ ಆಡಳಿತ ಕಾಲ ಅತ್ಯಂತ ಸುಭಿಕ್ಷವಾಗಿತ್ತು. ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತುಕೊಟ್ಟಿದ್ದಾರೆ. ಅವರ ಆದರ್ಶಗಳು ಎಲ್ಲರಿಗೂ ಮಾದರಿಯಾಗಲಿ ಎಂದು ಶುಭ ಹಾರೈಸಿದರು.
ಪುರಸಭಾ ಚೀಫ್ ಆಫೀಸರ್ ನಾಗರಾಜ್, ಪುರಸಭಾ ಅದ್ಯಕ್ಷೆ ಹರಿಣಾಕ್ಷಿ, ಪುರಸಭಾ ಉಪಾಧ್ಯಕ್ಷರಾದ ಸರಿತಾ, ಸ್ಥಾಯಿ ಸಮಿತಿ ಅಧ್ತಕ್ಷರಾದ ಅನಿಲ್, ಪುರಸಭಾ ಸದಸ್ಯರು, ಉಪ ತಹಶಿಲ್ದಾರ್ ಗಳಾದ ದೇವಕಿ, ರವಿಕಿರಣ್, ಅಶೋಕ್ ಕೋಟೆಕಾರ್ , ರೆವಿನ್ಯೂ
ಇನ್ಸ್ ಪೆಕ್ಟರ್ ಇಜ್ಜಾರ್ ಸಾಬಿರ್, ಕಾಪು ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ನೀಲಾನಂದ ನಾಯ್ಕ್, ಪಲಿಮಾರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಗ್ರೆಟ್ಟಾ ಮೊರಸ್,
ತಾಲ್ಲೂಕು ಕಚೇರಿ ಸಿಬ್ಬಂದಿ, ಗ್ರಾಮಾಡಳಿತಾಧಿಕಾರಿಗಳು,
ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಹಾಜರಿದ್ದರು.
ದೇವಿಚರಣ್ ಕಾರ್ಯಕ್ರಮ ನಿರೂಪಿಸಿದರು. ಲೋಕನಾಥ್ ಸ್ವಾಗತಿಸಿ, ದೇವಕಿ ವಂದಿಸಿದರು.