ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ದಕ್ಷಿಣ, ಉತ್ತರ, ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ

Posted On: 28-06-2025 10:38PM

ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಮಹಮ್ಮದ್ ನಿಯಾಝ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ದಕ್ಷಿಣ, ಉತ್ತರ ಅಧ್ಯಕ್ಷರುಗಳಾದ ಗೌರೀಶ್ ಹಾಗೂ ಶರತ್ ನಾಯಕ್ ಮತ್ತು ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ಶನಿವಾರ ಕಾಪು ರಾಜೀವ ಭವನದಲ್ಲಿ ಜರಗಿತು.

ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಆಡಳಿತಾರೂಢ ಮೋದಿ ಸರಕಾರದಿಂದ ಸಂವಿಧಾನಕ್ಕೆ ಧಕ್ಕೆ ತರುವಂತಾಗಿದೆ. ಜನಪರ ಆಶಯಕ್ಕೆ ಕಾಂಗ್ರೆಸ್ ನಿಂದ ಸಂವಿಧಾನ ತಿದ್ದುಪಡಿ ಆಗಿದೆ. ಕಾಂಗ್ರೆಸ್ ದೇಶಕ್ಕೆ ಸ್ವಾತಂತ್ರ್ಯ, ಸಂವಿಧಾನ ನೀಡಿದ ಪಕ್ಷ. ಶೇ.40 ರಷ್ಟು ಯುವಕರ ಸೇರ್ಪಡೆಯಾದಾಗ ಮಾತ್ರ ಪಕ್ಷ ಬೆಳವಣಿಗೆ ಸಾಧ್ಯ. ದೇಶದ ಸಂವಿಧಾನ ನಮ್ಮ ಸಿದ್ಧಾಂತ. ಬಿಜೆಪಿಯಿಂದ ಸಂವಿಧಾನದ ಮೂಲ ಅಂಶ ಸಮಾಜವಾದಿ, ಜಾತ್ಯಾತೀತ ತೆಗೆದು ಹಾಕಲು ಚಿಂತನೆಯಾಗಿದೆ. ಸಂವಿಧಾನಕ್ಕೆ ಧಕ್ಕೆ ಬಂದರೆ ನಾವೆಲ್ಲರೂ ವಿರೋಧಿಸಲು ಅಣಿಯಾಗಬೇಕಿದೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮಾತನಾಡಿ, ಯುವ ಕಾಂಗ್ರೆಸ್ ಕಾಂಗ್ರೆಸ್ ಪಕ್ಷದ ಬೆನ್ನೆಲುಬು. ಕಾಂಗ್ರೆಸ್ ಹಿರಿಯರ ಮಾರ್ಗದರ್ಶನದಲ್ಲಿ ಯುವಕರನ್ನು ಪಕ್ಷದೆಡೆ ಆಕರ್ಷಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯು ಕಾಂಗ್ರೆಸ್ ತಂಡವನ್ನು ಅಭಿನಂದಿಸಿದರು.

ಮಹಮ್ಮದ್ ನಿಯಾಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಕಾಪು ಬ್ಲಾಕ್ (ದ) ಅಧ್ಯಕ್ಷ ವೈ. ಸುಕುಮಾರ್, ಕಾಪು ಬ್ಲಾಕ್ (ಉ)ಅಧ್ಯಕ್ಷ ಸಂತೋಷ್ ಕುಲಾಲ್, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ.ಗಫೂರ್, ಕೆಪಿಸಿಸಿ ಸಂಯೋಜಕ ನವೀನ್ ಚಂದ್ರ ಶೆಟ್ಟಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ನವೀನ್ ಸುವರ್ಣ, ಕಾಪು ದಿವಾಕರ ಶೆಟ್ಟಿ, ಅರ್ಜುನ್, ಶರ್ಫುದ್ದೀನ್ ಶೇಖ್, ಶಾಂತಲತಾ ಶೆಟ್ಟಿ, ಹಸನಬ್ಬ ಶೇಕ್, ರಮೀಝ್ ಹುಸೇನ್, ವಿಶ್ವಾಸ್ ಅಮೀನ್, ಅಝೀಝ್, ನವೀನ್ ಎನ್ ಶೆಟ್ಟಿ, ದೀಪಕ್ ಕೋಟ್ಯಾನ್, ಹರೀಶ್ ಕಿಣಿ ಮತ್ತಿತರರು ಉಪಸ್ಥಿತರಿದ್ದರು.