ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೌಮ್ಯ ರೆಡ್ಡಿ ಭೇಟಿ

Posted On: 03-07-2025 08:34PM

ಪಡುಬಿದ್ರಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್, ಕಾಪು ನಾಲ್ಕು ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ, ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.