ಕಾಪು : ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು ಶಾಲೆಯಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶಂಕರಪುರ ವತಿಯಿಂದ ಶಾಲಾಮಕ್ಕಳಿಗೆ ಪಾಯಸ ಸೇವೆ ನೀಡಲಾಯಿತು.
ಶ್ರೀ ಸಾಯಿ ಈಶ್ವರ್ ಗುರೂಜಿಯವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಾಯಿ ಮಂದಿರದ ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ಲಾವಣ್ಯ, ಶಾಲಾ ಸಂಚಾಲಕ ಪ್ರವೀಣ್ ಕುಮಾರ್ ಗುರ್ಮೆ,
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಕಿಶನ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಲಕ್ಷ್ಮೀ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ, ಶಾಲಾ ಶಿಕ್ಷಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.