ಪಡುಬಿದ್ರಿ: ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು.
ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ ಮಹಾಸಭಾ ಮುಂಬೈ ಇವರ ಸಹಕಾರದೊಂದಿಗೆ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಉಡುಪಿ ಜಿಲ್ಲಾ ಮೀನುಗಾರ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಮಾತನಾಡಿ, ವಿದ್ಯಾರ್ಥಿವೇತನದ ಸಹಾಯ ಪಡೆದುಕೊಳ್ಳುವ ಪ್ರತಿಯೊಬ್ಬರೂ ಭವಿಷ್ಯದಲ್ಲಿ ಸುಂದರ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು. ಯುವಕ ಯುವತಿ ವೃಂದದಂತಹ ಸಂಘಟಿತ ವೇದಿಕೆ ನಿರ್ಮಾಣವಾಗಬೇಕು. ಇದರಿಂದ ಶೈಕ್ಷಣಿಕವಾಗಿ ಮಾತ್ರವಲ್ಲದೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಈ ಸಂದರ್ಭ ಊರಿನ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.
ಕಾಡಿಪಟ್ಣ ಮೊಗವೀರ ಮಹಾಸಭಾದ ಕೋಶಾಧಿಕಾರಿ ಅಶೋಕ್ ಬಂಗೇರ, ಕೆ.ಎನ್.ವಿ.ಪಿ ಸದಸ್ಯ ಸುಧಾಕರ್ ಸಾಲ್ಯಾನ್, ಮಹಿಳಾ ಸಭಾ ದ ಅಧ್ಯಕ್ಷೆ ಸರಳಾ ಕಾಂಚನ್, ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ ಮಾಲತಿ ಸಾಲ್ಯಾನ್, ಗುರು ಪ್ರಸಾದ್, ಶರತ್ ಕರ್ಕೇರ, ನಾರಾಯಣ ಕಕೇರ, ಉದಯ ಸಾಲ್ಯಾನ್, ಸತೀಶ್ ಕೋಟ್ಯಾನ್, ಜೀವನ್ ಎಸ್ ಸುವರ್ಣ, ಮಿಥುನ್ ಸಾಲ್ಯಾನ್, ದೇವರಾಜ್ ಬಂಗೇರ, ಅಕ್ಷಿತ್ ಕರ್ಕೇರ, ಆಡಳಿತ ಮಂಡಳಿ ಸದಸ್ಯರು ಮತ್ತು ಊರಿನ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಸ್ವಾಗತಿಸಿ, ನಿರೂಪಿಸಿದರು.