ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ

Posted On: 14-07-2025 06:43PM

ಕಾಪು : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಗು ಮುನ್ನ ಕಾಪು ರಾಜೀವ ಭವನದಿಂದ ತಹಶಿಲ್ದಾರ್‌ ಕಛೇರಿವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಮೆರವಣಿಗೆಯಲ್ಲಿ ಸಾಗಿ ಬಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಪಂಚ ಗ್ಯಾರಂಟಿಯ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಜನ ಮನ ಗೆದ್ದಿದೆ. ಇದನ್ನು ಸಹಿಸದ ಬಿಜೆಪಿ ಪಕ್ಷದವರು ಏನು ಮಾಡಲು ತೋಚದೆ ಕಾಂಗ್ರೆಸ್ ಪಕ್ಷದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಪು ಶಾಸಕರು ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸುವ ಕಾರ್ಯ ಮಾಡಲಿ. ಹದಿನಾರು ಪಂಚಾಯತ್ ಗಳಲ್ಲಿ ಬಿಜೆಪಿಯವರ ಸುಳ್ಳು ಮತ್ತು ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡುವುದರ ಮುಖೇನ ನೈಜತೆಯನ್ನು ಜನತೆಯ ಮುಂದೆ ಇಡುವ ಕೆಲಸವನ್ನು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಈ ಸಂದರ್ಭ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ನಿಯಾಝ್, ನವೀನ್‌ಚಂದ್ರ ಸುವರ್ಣ, ಎಂಎ ಗಫೂರ್‌, ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ಶರ್ಫುದ್ಧೀನ್‌ ಶೇಖ್‌, ನವೀನ್‌ ಎನ್‌ ಶೆಟ್ಟಿ, ಕಾಪು ದಿವಾಕರ ಶೆಟ್ಟಿ ಮತ್ತು ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.