ಕಾಪು : ಪ್ರವಾದಿ ಮುಹಮ್ಮದ್ (ಸ) ರವರು ಅರೆಬಿಕ್ ಕ್ಯಾಲೆಂಡರ್ ಪ್ರಕಾರ ರಬೀವುಲ್ ಅವ್ವಲ್ ತಿಂಗಳಿನಲ್ಲಿ ಜನಿಸಿದರು, ಅವರ ಸಾರ್ವಕಾಲಿಕ ಬೋಧನೆಗಳನ್ನು ಜನತೆಗೆ ತಿಳಿಯಪಡಿಸಲು ಜಮಾಅತೆ ಇಸ್ಲಾಮಿ ಹಿಂದ್, ಕರ್ನಾಟಕದ ವತಿಯಿಂದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಶೀರ್ಷಿಕೆಯಡಿ ಸೆಪ್ಟೆಂಬರ್ 3 ರಿಂದ 14ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಪ್ರವಾದಿ ಮುಹಮ್ಮದ್ (ಸ)ರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನು ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮಿಯರ ನಡುವಿನ ಪರಸ್ಪರ ಸಂಬಂಧಗಳನ್ನು ಬಲಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ.
ಈ ಅಭಿಯಾನದ ಪ್ರಯುಕ್ತ ಶಾಂತಿ ಪ್ರಕಾಶನ ಪ್ರಕಟಿಸಿರುವ ಪ್ರವಾದಿಯವರ ಬದುಕು ಮತ್ತು ಸಂದೇಶಗಳ ಬಗ್ಗೆ ಬೆಳಕು ಚೆಲ್ಲುವ ಎರಡು ಹೊಸ ಪುಸ್ತಕಗಳನ್ನು ರಾಜ್ಯಾದ್ಯಂತ ಬಿಡುಗಡೆಗೊಳಿಸಲಾಗುವುದು.
ಈ ಅಭಿಯಾನದ ಭಾಗವಾಗಿ ರಾಜ್ಯಾದ್ಯಂತ ವಿವಿಧ ಸಮಾಜ ಸೇವಾ ಚಟುವಟಿಕೆಗಳು, ಸಂವಾದ, ವಿಚಾರಗೋಷ್ಠಿ, ಸಾರ್ವಜನಿಕ ಸಭೆಗಳು, ಪ್ರಬಂಧ ಸ್ಪರ್ಧೆ ಮುಂತಾದ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಕಾಪು ವರ್ತುಲದಿಂದ ವಿಚಾರ ಗೋಷ್ಠಿ. ಚಹಾ ಕೂಟ, ಆಸ್ಪತ್ರೆ ಸಂದರ್ಶನ, ಹಣ್ಣು ಹಂಪಲು ವಿತರಣೆ, ವೃದ್ದಾಶ್ರಮ ಭೇಟಿ, ಅನಾಥಶ್ರಮ ಭೇಟಿ, ಪುಸ್ತಕ ಬಿಡುಗಡೆ ಕಾರ್ಯಕ್ರಮ, ವೈಯಕ್ತಿಕ ಮತ್ತು ತಂಡ್ಡ ಭೇಟಿ, ಫೋಲ್ಡರ್ಸ್ ವಿತರಣೆ, ವೈದ್ಯಕೀಯ ತಪಾಸಣಾ ಶಿಬಿರ ಇತ್ಯಾದಿ ಕಾರ್ಯಕ್ರಮಗಳು ಹಾಕಿ ಕೊಂಡ್ದಿದ್ದು ಅದನ್ನು ಈ ಅಭಿಯಾನದಲ್ಲಿ ಕಾರ್ಯಗತಗೊಳಿಸಲಾಗುವುದು ಎಂದು ಕಾಪು ವರ್ತುಲದ ಜಮಾ ಅತೆ ಇಸ್ಲಾಮೀ ಹಿಂದ್ ನ ಅಧ್ಯಕ್ಷರಾದ ಅನ್ವರ್ ಅಲಿ ಕಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.