ಪಡುಬಿದ್ರಿ: ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ನೂರಾನಿಯಾ ಹುದಾ ಮದ್ರಸ ಪಡುಬಿದ್ರಿ – ದೀನ್ ಸ್ಟ್ರೀಟ್, ಮಿಸ್ಕ್ – ಎ - ಮದೀನಾ ವತಿಯಿಂದ 2025ನೇ ಸಾಲಿನ ವಿದ್ಯಾರ್ಥಿಗಳ ಕಲಾ ಉತ್ಸವವು ಭಾನುವಾರ ಪಡುಬಿದ್ರಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ನೂರಾನಿಯಾ ಜುಮ್ಮಾ ಮಸೀದಿಯ ಮೌಲಾನಾ ಅಬ್ದುಲ್ ಕುದ್ದೂಸ್ ಉದ್ಘಾಟಿಸಿದರು.
ಜುಮ್ಮಾ ಮಸೀದಿಯ ಖತೀಬ್ ಎಸ್.ಎಂ. ಅಬ್ದುಲ್ ರಹ್ಮಾನ್ ಮದನಿ ಉಸ್ತಾದ್ ದುವಾ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಜುಮಾ ಮಸೀದಿ ಅಧ್ಯಕ್ಷರಾದ ಪಿ.ಕೆ. ಮೋಹಿದೀನ್ ವಹಿಸಿದ್ದರು.
ಈ ಸಂದರ್ಭದಲ್ಲಿ ಹಿಮಾಯತುಲ್ ಇಸ್ಲಾಂ ಸಂಘದ ಅಧ್ಯಕ್ಷ ಬುಡನ್ ಶೈಖ್, ಜುಮಾ ಮಸೀದಿ ಕಂಚಿನಡ್ಕ ಖತೀಬ್ ಅಬ್ದುಲ್ ಲತೀಫ್ ಮದನಿ, ಸದರ್ ಉಸ್ತಾದ್ ಅಶ್ರಫ್ ಸಅದಿ, ಮಾಜಿ ಅಧ್ಯಕ್ಷ ರಾದ ಅಬ್ದುಲ್ ರಹ್ಮಾನ್, ಜುಮಾ ಮಸೀದಿ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್, ಕೋಶಾಧಿಕಾರಿ ಎ.ಹೆಚ್. ಮೊಹಮ್ಮದ್, ಸದಸ್ಯರಾದ ಅಕ್ಬರ್, ಬಾಶ ಬೆಂಗ್ರೆ, ಎಂ.ಎಸ್ ಶಾಫಿ , ಮೈಯದಿ, ಇಸ್ಮಾಯಿಲ್, ಹಂಝ, ನಜ಼ೀರ್, ಮುಸ್ತಕ್ ಮತ್ತಿತರರು ವಿದ್ಯಾರ್ಥಿಗಳನ್ನು ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಕಲಾ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಸ್ಪರ್ಧೆಗಳು ಜರಗಿತು. ವಿಜೇತರಿಗೆ ಬಹುಮಾನ ವಿತರಿಸಲಾಯಿತು.