ಇನ್ನಂಜೆಯ ಸೋದೆ ಶಿಕ್ಷಣ ಸಮೂಹ ಸಂಸ್ಥೆಗಳಿಗೆ ಬಸ್ಸುಗಳ ಕೊಡುಗೆ
Posted On:
09-09-2025 08:17AM
ಶಿರ್ವ : ಶ್ರೀ ಸೋದೆ ವಾದಿರಾಜ ಮಠದಿಂದ ಪ್ರವರ್ತಿತವಾದ ಸೋದೆ ಸಮೂಹ ಶಿಕ್ಷಣ ಸಂಸ್ಥೆಯು ಸಮಗ್ರ ಶಿಕ್ಷಣ ನೀಡುತ್ತಿರುವುದನ್ನು ಮನಗಂಡ ಬೆಂಗಳೂರಿನ ಉದ್ಯಮ ಸಂಸ್ಥೆಯಾದ “ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್" ಸಿಎಸ್ಆರ್ ನಿಧಿಯಿಂದ ರೂ.48ಲಕ್ಷ ವೆಚ್ಚದ ಎರಡು ನೂತನ ಬಸ್ಸುಗಳ ಹಸ್ತಾಂತರ ಕಾರ್ಯಕ್ರಮವು ವಿದ್ಯಾಸಂಸ್ಥೆಯ ಆವರಣದಲ್ಲಿ ಜರಗಿತು.
ಲೀಪ್ ಫ್ರಾಗ್ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ಸಂಸ್ಥೆಯ ಐವರು ಉನ್ನತ ಅಧಿಕಾರಿಗಳ ಸಮ್ಮುಖದಲ್ಲಿ ಅದರ ಮುಖ್ಯಸ್ಥರಾದ ಪ್ರಭಾವ್ ಎನ್ ರಾವ್ ಹಾಗೂ ಅವರ ಧರ್ಮಪತ್ನಿ ಪ್ರಿಯಾ ಶೈಲಾ ಪಿ ರಾವ್ ಇವರು ಬಸ್ಸಿನ ಕೀಲಿಕೈಗಳನ್ನು ವಿಷ್ಣುಮೂರ್ತಿ ಹಯವದನ ಸ್ವಾಮಿ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷರಾದ ಶ್ರೀನಿವಾಸ ತಂತ್ರಿಗಳು ಮತ್ತು ಕಾರ್ಯದರ್ಶಿಗಳಾದ ರತ್ನಕುಮಾರ್ ಇವರಿಗೆ ಹಸ್ತಾಂತರಿಸಿದರು.
ಲೀಪ್ ಫ್ರಾಗ್ ಸಂಸ್ಥೆಯನ್ನು ಶ್ಲಾಘಿಸಿದ ಶ್ರೀ ಸೋದೆ ವಾದಿರಾಜ ಮಠದ ಶ್ರೀಪಾದರು, ಈ ಬಸ್ಸಿನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಸೂಚಿಸಿದರು ಹಾಗೂ ಲೀಪ್ ಫ್ರಾಗ್ ಸಂಸ್ಥೆಯ ಮುಖ್ಯಸ್ಥರ ಈ ಕೊಡುಗೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್, ಎಸ್ ವಿ ಹೆಚ್ ಪಿಯು ಕಾಲೇಜಿನ ಪ್ರಾಂಶುಪಾಲರು ಮತ್ತು ಪ್ರೌಢಶಾಲೆ, ಪ್ರಾಥಮಿಕ ಮತ್ತು ನರ್ಸರಿ ಶಾಲೆ ಇನ್ನಂಜೆ ವಿದ್ಯಾಸಂಸ್ಥೆಗಳ ಮುಖ್ಯೋಪಾಧ್ಯಯರು ಮತ್ತಿತ್ತರು ಉಪಸ್ಥಿತರಿದ್ದರು.