ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕರಾಟೆಯಲ್ಲಿ ಸಾಣೂರು ಸರಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಕು. ಸೃಜನಾ ರಾಜ್ಯಮಟ್ಟಕ್ಕೆ ಆಯ್ಕೆ

Posted On: 20-09-2025 12:31PM

ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಸಾಣೂರು ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಸೃಜನಾ ಆಯ್ಕೆಯಾಗಿದ್ದಾರೆ.

ಈಕೆ ಕಾಂತಾವರ ಗ್ರಾಮದ ಬಾರಾಡಿಯ ಜಗದೀಶ್ ಕುಲಾಲ್ ಮತ್ತು ಜ್ಯೋತಿ ಕುಲಾಲ್ ದಂಪತಿಗಳ ಸುಪುತ್ರಿ.