ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಿನಾದ ಕ್ರಿಯೇಷನ್ ಯುಟ್ಯೂಬ್ ಚಾನಲ್ ಅರ್ಪಿಸುವ ಕಾಪು ಮಾರಿಯಮ್ಮನ ಭಕ್ತಿ ಗಾಯನವು ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಇವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಾರಿಗುಡಿಯ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿ, ಮಾರಿಗುಡಿಯ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಯೋಗೀಶ್ ವಿ. ಶೆಟ್ಟಿ ಬಾಲಾಜಿ, ರಮೇಶ್ ಹೆಗ್ಡೆ ಕಲ್ಯ, ರವೀಂದ್ರ ಮಲ್ಲಾರು, ಜಯ ರಾಣ್ಯ ಮಲ್ಲಾರು, ಬಿ ಕೆ ಶ್ರೀನಿವಾಸ್ ಮಲ್ಲಾರು, ಹಾಗು ಚಂದ್ರಶೇಖರ್ ಎಸ್. ಕಟಪಾಡಿ ಮತ್ತಿತರರು ಉಪಸ್ಥಿತರಿದ್ದರು.