ಹೆಜಮಾಡಿ : ಇಲ್ಲಿನ ವಿಶ್ವ ಹಿಂದೂ ಪರಿಷತ್, ಹೆಜಮಾಡಿ ಸಾರ್ವಜನಿಕ ಗಣೇಶೋತ್ಸವ ಸುವರ್ಣ ಮಹೋತ್ಸವ ಸಮಿತಿಯ ವತಿಯಿಂದ ರೂ.1,11,111 (ಒಂದು ಲಕ್ಷದ ಹನ್ನೊಂದು ಸಾವಿರದ ನೂರ ಹನ್ನೊಂದು) ಮೊತ್ತದ ಹಣವನ್ನು ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ ಇದರ ಜೀರ್ಣೋದ್ಧಾರ ಕಾರ್ಯಕ್ಕೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ವಿಶ್ವ ಹಿಂದೂ ಪರಿಷತ್, ಹೆಜಮಾಡಿ ಅಧ್ಯಕ್ಷರು, ಪದಾಧಿಕಾರಿಗಳು, ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆಯ ಪ್ರಮುಖರು ಉಪಸ್ಥಿತರಿದ್ದರು.