ಬೆಳ್ಳೆ : ರೋಜ್‌ಗಾರ್ ದಿವಸ್ ಮತ್ತು ಆರೋಗ್ಯ ತಪಾಸಣೆ
Posted On:
21-09-2025 05:45PM
ಶಿರ್ವ : ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾರ್ಮಿಕರ "ರೋಜ್‌ಗಾರ್ ದಿವಸ್" ಆಚರಣೆ ಮತ್ತು ಆರೋಗ್ಯ ತಪಾಸಣಾ ಕಾರ್ಯಕ್ರಮ ಶನಿವಾರ ಶ್ರೀಪಾಜಕ ಕ್ಷೇತ್ರದ ಆವರಣದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಬೆಳ್ಳೆ ಗ್ರಾ.ಪಂ.ಅಧ್ಯಕ್ಷೆ ದಿವ್ಯಾ ವಿ.ಆಚಾರ್ಯ ವಹಿಸಿದ್ದರು. ಪಾಕಜಕ್ಷೇತ್ರದ ಪ್ರಧಾನ ಅರ್ಚಕರಾದ ವೇ.ಮೂ.ಮಾಧವ ಉಪಾಧ್ಯಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ಮಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಹರಿಕೃಷ್ಣ ಉಪಾಧ್ಯಾಯ ಸಾಂಪ್ರದಾಯಿಕ ಕೃಷಿಯ ಬಗ್ಗೆ ಮಾಹಿತಿ ನೀಡಿದರು. ಯೋಜನೆಯ ತಾಲೂಕು ಮಟ್ಟದ ಬಿಎಫ್‌ಟಿ ಶಂಕರ್ ಸಕಾಲಿಕ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪಿಡಿಒ ಆನಂದ್ ಕುಲಕರ್ಣಿ, ಪಂಚಾಯತ್ ಸದಸ್ಯರಾದ ಪ್ರೇಮಾ ವೆಂಕಟೇಶ್, ಹರೀಶ್ ಶೆಟ್ಟಿ, ಯೋಜನೆಯ ತಾಲೂಕು ತಾಂತ್ರಿಕ ಸಂಯೋಜಕ ಪವನ್, ಯೋಜನೆಯ ವಿಷಯ ನಿರ್ವಾಹಕಿ ನೀತಾ ನಾಯಕ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯರ್ತರು, ಪಂಚಾಯತ್ ಸಿಬ್ಬಂದಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.
ಪಂಚಾಯತ್ ಸದಸ್ಯ ಪರಶುರಾಮ ಭಟ್ ಸ್ವಾಗತಿಸಿದರು. ಪಂಚಾಯತ್ ಉಪಾಧ್ಯಕ್ಷ ಶಶಿಧರ ವಾಗ್ಲೆ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ನಂತರ ಸಾಮೂಹಿಕ ಆರೋಗ್ಯ ತಪಾಸಣೆ ನಡೆಯಿತು.