ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ.) ಪಡುಬಿದ್ರಿಗೆ ಮಾಜಿ ಸಂಸದ ಹಾಗು ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಭೇಟಿನೀಡಿದರು. ಈ ಸಂದರ್ಭ ಮಾತನಾಡಿದ ಅವರು ಪಡುಬಿದ್ರಿ ಸೊಸೈಟಿಯ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಕೊರೊನಾದಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಸಹಕಾರಿಸಂಸ್ಥೆಗಳು ಜನರ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭ ಸೊಸೈಟಿಯ ಅಧ್ಯಕ್ಷ ರಾದ ವೈ. ಸುಧೀರ್ ಕುಮಾರ್, ಸೊಸೈಟಿಯ ನಿರ್ದೇಶಕರಾದ ಶಿವರಾಮ ಎನ್. ಶೆಟ್ಟಿ , ರಾಜಾರಾಮ ರಾವ್, ಮಾಧವ ಆಚಾರ್ಯ, ಯಶವಂತ , ಶ್ರೀಮತಿ ಸುಚರಿತಾ ಎಲ್ ಅಮೀನ್, ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತ ಪಿ.ಎಚ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.