ಭಾರತ್ ಬ್ಯಾಂಕ್ ಮಾಜಿ ಅಧ್ಯಕ್ಷ, ಬಿಲ್ಲವ ಮುಖಂಡ ಜಯ ಸಿ ಸುವರ್ಣ ಇನ್ನಿಲ್ಲ
Posted On:
21-10-2020 11:25AM
ಶ್ರೀ ಜಯ ಸಿ ಸುವರ್ಣ (ಭಾರತ್ ಬ್ಯಾಂಕಿನ ಮಾಜಿ ಅಧ್ಯಕ್ಷರು) ಅವರ ಸ್ವರ್ಗೀಯ ವಾಸಸ್ಥಾನಕ್ಕೆ ತೆರಳಿದ್ದಾರೆ ಎಂದು ತಿಳಿಸಲು ತುಂಬಾ ದುಃಖವಾಗಿದೆ.
ಮುಂಬಯಿಯಲ್ಲಿ ಹೊಟೇಲ್ ಉದ್ಯಮಿಯಾಗಿದ್ದ ಜಯ ಸಿ.ಸುವರ್ಣ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಮುಂಬಯಿ ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಅಧ್ಯಕ್ಷರಾಗಿ, ಅಭಿವೃದ್ಧಿಯ ರೂವಾರಿಯಾಗಿದ್ದರು. ಬಿಲ್ಲವ ಭವನ ಮುಂಬಯಿ ಮತ್ತು ಮಹಾಮಂಡಲ ಭವನ ಮುಲ್ಕಿ ಇದರ ನಿರ್ಮಾತೃ ಆಗಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರ ಅಂತ್ಯಕ್ರಿಯೆ ಇಂದು (ಬುಧವಾರ) ಮಧ್ಯಾಹ್ನ 3.00 ರ ಸುಮಾರಿಗೆ ನಡೆಯಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮೃತರು ಪತ್ನಿ, ನಾಲ್ವರು ಪುತ್ರರು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.