ಕಟಪಾಡಿಯ ಏಣಗುಡ್ಡೆಯ ದುರ್ಗಾನಗರ ಶ್ರೀ ಚೌಡೇಶ್ವರಿ ದೇವಿಯ ಸನ್ನಿಧಾನದಲ್ಲಿ ನವರಾತ್ರಿ ಪ್ರಯುಕ್ತ 17-10-2020ರಿಂದ 25-10-2020ರವರೆಗೆ ಪ್ರತಿದಿನ ಸಂಜೆ 6ರಿಂದ ಭಜನಾ ಕಾರ್ಯಕ್ರಮ ಮತ್ತು 7: 30ಕ್ಕೆ ಮಹಾಪೂಜೆ ನಡೆಯಲಿದೆ.
17 ರಂದು ಬೆಳಗ್ಗೆ ದೇವತಾ ಪ್ರಾರ್ಥನೆ, ಪುಣ್ಯಾಹ, ಪಂಚಗವ್ಯ, ಕಲಶ ಸ್ಥಾಪನೆ, ಮಹಾಪೂಜೆ. 24 ರಂದು ಬೆಳಿಗ್ಗೆ ಪುಣ್ಯಾಹವಾಚನ, ಮಧ್ಯಾಹ್ನ 12ಕ್ಕೆ ಪೂರ್ಣಾಹುತಿ, ಮಹಾಪೂಜೆ, ಶ್ರೀ ಚಂಡಿಕಾ ಹೋಮ, ಅನ್ನಸಂತರ್ಪಣೆ ಮತ್ತು 2: 30ಕ್ಕೆ ದೇವಿಯ ದರ್ಶನ ಸೇವೆ ನಡೆಯಲಿದ್ದು, ಅಂದು ಮಧ್ಯಾಹ್ನ 12 ರಿಂದ ಶ್ರೀ ಚೌಡೇಶ್ವರಿ ದೇವಿ ಕಲಾ ಬಳಗದವರಿಂದ ಭಕ್ತಿಗಾನಂಜಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.