2020 ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ಕಾಪು ತಾಲೂಕಿನಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಶ್ರೀ ದಿನಕರ ಭಂಡಾರಿ ಕಣಜಾರು, ಸಾಹಿತ್ಯ ಕ್ಷೇತ್ರದಲ್ಲಿ ನವೀನ್ ಸುವರ್ಣ ಪಡ್ರೆ, ನೃತ್ಯ ಕ್ಷೇತ್ರದಲ್ಲಿ ಶ್ರೀಮತಿ ಮಂಗಳ ಕಿಶೋರ್ ದೇವಾಡಿಗ ಉಚ್ಚಿಲ, ಕ್ರೀಡಾ ಕ್ಷೇತ್ರದಲ್ಲಿ ಶರತ್ ಶೆಟ್ಟಿ ಪಡುಬಿದ್ರಿ ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಇದನ್ನು ನವೆಂಬರ್ ಒಂದು ಕನ್ನಡ ರಾಜ್ಯೋತ್ಸವದಂದು ಉಡುಪಿಯಲ್ಲಿ ನಡೆಯುವ ಸಮಾರಂಭದಲ್ಲಿ ನೀಡಲಾಗುವುದು.