ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸ್ವಚ್ಛ ಭಾರತ್ ಫ್ರೆಂಡ್ಸ್ ಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

Posted On: 01-11-2020 08:19PM

೬ ವರ್ಷಗಳಿಂದ ಸ್ವಚ್ಛ ಭಾರತ, ಸ್ವಸ್ಥ ಭಾರತ, ಗ್ರಾಮ ಭಾರತ ಮತ್ತು ಡಿಜಿಟಲ್ ಭಾರತ ಅಡಿಯಲ್ಲಿ ಹಲವಾರು ಸಮಾಜಮುಖಿ ಯೋಜನೆಗಳೊಂದಿಗೆ ಉಡುಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಘಕ್ಕೆ ೨೦೨೦ ನೇ ಸಾಲಿನ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಇಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪಂಚಾಯತ್ ಸಿಇಓ ಡಾ. ನವೀನ್ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಎಸ್ಪಿ ವಿಷ್ಣುವರ್ಧನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್, ಕನ್ನಡ ಸಾಹಿತ ಪರಿಷತ್ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಸ್ವಚ್ಛ ಭಾರತ್ ಫ್ರೆಂಡ್ಸ್ ಸಂಚಾಲಕ ಗಣೇಶ್ ಪ್ರಸಾದ್ ಜಿ. ನಾಯಕ್, ಜಿಲ್ಲಾ ಸಂಯೋಜಕ ರಾಘವೇಂದ್ರ ಪ್ರಭು ಕರ್ವಾಲು, ಜಗದೀಶ್ ಶೆಟ್ಟಿ, ಉದಯ ನಾಯ್ಕ್, ಶಕೀರ್ ಹಾವಂಜೆ, ವೀಕ್ಷಿತ್, ರಫೀಕ್ ಖಾನ್ ಉಪಸ್ಥಿತರಿದ್ದರು.