ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಮೊಗವೀರ ಯುವ ಸಂಘಟನೆ (ರಿ.), ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಯುವಕ ಮಂಡಲ (ರಿ.) ಇನ್ನಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಇನ್ನಂಜೆ ದಾಸ ಭವನದಲ್ಲಿ ಡಾ| ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾಡ್೯ ನೋಂದಣಿ ಕಾರ್ಯಕ್ರಮ ಜರಗಿತು.
ಕಾರ್ಯಕ್ರಮವನ್ನು ಆರ್ ಝೋನ್ 5.ರ ಸಹಾಯಕ ಗವರ್ನರ್ ನವೀನ್ ಅಮೀನ್ ಶಂಕರಪುರ ಉದ್ಘಾಟಿಸಿದರು.
ಈ ಸಂದರ್ಭ ರೋಟರಿ ಸಮುದಾಯ ದಳದ ಇನ್ನಂಜೆಯ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಕಾರ್ಯದರ್ಶಿ ಮನೋಹರ್ ಕಲ್ಲುಗುಡ್ಡೆ, ಇನ್ನಂಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ರೋ. ಮಾಲಿನಿ ಶೆಟ್ಟಿ ಇನ್ನಂಜೆ, ಇನ್ನಂಜೆ ಯುವಕ ಮಂಡಲದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಲ್ಯಾಲು, ಪ್ರಶಾಂತ್, ಜೇಸುದಾಸ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 80 ಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿದರು.