ಕನ್ನಡ ಸಂಘ ಕಾಂತಾವರ ಕನ್ನಡ ಸಂಘದ 2020 ನೇ ಸಾಲಿನ ದತ್ತಿನಿಧಿಗಳ ಪ್ರಶಸ್ತಿ ಪ್ರದಾನ ಸಮಾರಂಭ ಡಿಸೆಂಬರ್ 13, ಮಧ್ಯಾಹ್ನ 3 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಮಾಜಿ ಅಧ್ಯಕ್ಷರಾದ ಧರ್ಮದರ್ಶಿ ಶ್ರೀ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಪ್ರಶಸ್ತಿ ಮಾನ್ಯರು :
ಕರ್ನಾಟಕ ಏಕೀಕರಣದ ನೇತಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಪ್ರಶಸ್ತಿಯನ್ನು ಭಾರತೀಯ ಭಾಷಾ ಗಣಕ ಪಿತಾಮಹ ನಾಡೋಜ ಕೆ. ಪಿ. ರಾವ್,
ಭಾಷಾವಿಜ್ಞಾನಿ ಡಾ.ಯು.ಪಿ. ಉಪಾಧ್ಯಾಯರ ದತ್ತಿ ನಿಧಿಯ ಮಹೋಪಾಧ್ಯಾಯ ಪ್ರಶಸ್ತಿಯನ್ನು ವಿದ್ವಾಂಸ, ಚಿಂತಕ ಕೆ.ಎಲ್. ಕುಂಡಂತಾಯ,
ಮೊಗಸಾಲೆ ಪ್ರತಿಷ್ಠಾನದ ದತ್ತಿನಿಧಿಯ ಕಾಂತಾವರ ಲಲಿತಕಲಾ ಪ್ರಶಸ್ತಿಯನ್ನು ಹಿರಿಯ ಸಾಹಿತಿ, ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ,
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಕಾಂತಾವರ ಸರೋಜನಿ ನಾಗಪ್ಪಯ್ಯ ಈಶ್ವರಮಂಗಲ ಅವರ ದತ್ತಿ ನಿಧಿಯ ಕಾಂತಾವರ ಸಾಹಿತ್ಯ ಪ್ರಶಸ್ತಿಯನ್ನು ಸಾಹಿತಿ,ಚಿಂತಕ ಟಿ.ಎ.ಎನ್.ಖಂಡಿಗೆ,
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಂಪತಿ ದಿವಂಗತ ಕೆ. ಬಾಲಕೃಷ್ಣ ಆಚಾರ್ಯ ಮತ್ತು ಶ್ರೀಮತಿ ವಾಣಿ ಬಿ. ಆಚಾರ್ಯ ಅವರ ದತ್ತಿ ನಿಧಿಯ ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿಯನ್ನು ಅಪರೂಪದ ಶಿಕ್ಷಕ ಮುರಳಿ ಕಡೆಕಾರ್, ಉಡುಪಿ ಪಡೆಯಲಿದ್ದಾರೆ ಎಂದು ನಮ್ಮ ಕಾಪು ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.