ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ರಾಕೇಶ್ ಕುಂಜೂರು ಆಯ್ಕೆ

Posted On: 01-12-2020 05:09PM

ಕಾಪು, ಡಿ. ೧ : ಕಾಪು ತಾಲೂಕು ಕಾರ್ಯನಿರತರ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಉದಯವಾಣಿ ಪತ್ರಿಕೆಯ ಕಾಪು ವರದಿಗಾರ, ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು ಆಯ್ಕೆಯಾಗಿದ್ದಾರೆ.

ಭಾರತ್ ಬಿಕ್ಕೋ ಕಂಪನಿ ಆವರಣದಲ್ಲಿರುವ ಕಾಪು ಪ್ರೆಸ್ ಕ್ಲಬ್‌ನಲ್ಲಿ ಡಿ. ೧ರಂದು ಜರಗಿದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಉಪಾಧ್ಯಕ್ಷರಾಗಿ ವಿಜಯ ಆಚಾರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಶಫಿ ಅಹಮದ್ ಉಚ್ಚಿಲ, ಕೋಶಾಧಿಕಾರಿಯಾಗಿ ಪುಂಡಲೀಕ ಮರಾಠೆ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಸುವರ್ಣ ಕಟಪಾಡಿ, ಕ್ರೀಡಾ ಕಾರ್ಯದರ್ಶಿಯಾಗಿ ವಾದಿರಾಜ ರಾವ್ ನಡಿಮನೆ, ಪ್ರೆಸ್ ಕ್ಲಬ್ ಕೋ. ಆರ್ಡಿನೇಟರ್ ಆಗಿ ಸಂತೋಷ್ ಕಾಪು ಅವರನ್ನು ಆಯ್ಕೆ ಮಾಡಲಾಯಿತು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಸಂಘದ ಅಧ್ಯಕ್ಷ ಪ್ರಮೋದ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷರಾದ ರಾಮಚಂದ್ರ ಆಚಾರ್ಯ, ಬಾಲಕೃಷ್ಣ ಪೂಜಾರಿ, ಪ್ರಕಾಶ್ ಸುವರ್ಣ ಕಟಪಾಡಿ ಮೊದಲಾದವರು ಉಪಸ್ಥಿತರಿದ್ದರು.