ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉದ್ಯಾವರ : ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ

Posted On: 08-12-2020 09:33AM

ಐಸಿವೈಎಂ ಉದ್ಯಾವರ ಸುವರ್ಣ ಮಹೋತ್ಸವ ಸಮಿತಿಯ ನೇತೃತ್ವದಲ್ಲಿ  ಉದ್ಯಾವರದ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಸಭಾಭವನದಲ್ಲಿ ಸುವರ್ಣ ಮಹೋತ್ಸವ ವರ್ಷದ 35ನೇ ಕಾರ್ಯಕ್ರಮ ಮಕ್ಕಳಿಗಾಗಿ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆಯು ಜರಗಿತು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಟಪಾಡಿಯ ಬಾಲ ಜಾದೂಗಾರ ಮಾಸ್ಟರ್ ಪ್ರಥಮ್ ಕಾಮತ್ ಜಾದೂ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ನೀಡಿದರು. 

ಕಾರ್ಯಕ್ರಮದಲ್ಲಿ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ಧರ್ಮಗುರುಗಳಾದ ರೊಲ್ವಿನ್ ಅರಾನ್ಹ, ಐಸಿವೈಎಂ ಸುವರ್ಣಮಹೋತ್ಸವದ ಅಧ್ಯಕ್ಷರಾದ ಮೈಕಲ್ ಡಿಸೋಜ   ಸ್ಟೀವನ್ ಕುಲಸೋ, ಕಾರ್ಯಕ್ರಮದ ಪ್ರಾಯೋಜಕರು ಹಾಗು ಸಿವೈಎ ಮಾಜಿ ಅಧ್ಯಕ್ಷರಾದ ಮೈಕಲ್ ಮಜಾದೋ ಮತ್ತು ಕುಟುಂಬಸ್ಥರು ಮತ್ತಿತರರು ಉಪಸ್ಥಿತರಿದ್ದರು.