ಉಡುಪಿ: ಕೇಂದ್ರ ಸರ್ಕಾರದ ನೂತನ ಮೂರು ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ರೈತ ಸಂಘಟನೆಗಳು ಮಂಗಳವಾರ ದೇಶಾದ್ಯಂತ ಕರೆ ನೀಡಿರುವ ಭಾರತ ಬಂದ್ ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದ್ದು, ಎಂದಿನಂತೆ ಅಟೋಗಳು ಸಂಚರಿಸುತ್ತಿದ್ದು, ಪೊಲೀಸರು ನಗರದಾದ್ಯಂತ ಗಸ್ತು ತಿರುಗುತ್ತಿದ್ದಾರೆ. ಬಸ್ ನಿಲ್ದಾಣ ಸಮೀಪದ ಹೋಟೆಲ್, ಅಂಗಡಿಗಳು ತೆರೆದಿವೆ.