ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಸಚಿವ ಕೋಟ ವಿರುದ್ಧ ಕಿಡಿಗೇಡಿಗಳ ಅಂತರ್ಜಾಲ ಅಪಪ್ರಚಾರಕ್ಕೆ ವ್ಯಾಪಕ ಖಂಡನೆ

Posted On: 20-01-2021 08:50PM

ಕೋಟ: ದ.ಕ ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ ಅವಹೇಳನ ಬರಹವನ್ನು ಫೇಸ್‌ಬುಕ್‌ ಖಾತೆಯಲ್ಲಿ ಹರಿಬಿಟ್ಟ ಅನಿಲ್ ಕುಮಾರ್ ಶೆಟ್ಟಿ ಎನ್ನುವವನ ವಿರುದ್ಧ ವ್ಯಾಪಕ ಟೀಕೆ ಹಾಗೂ ಖಂಡನೆ ವ್ಯಕ್ತವಾಗಿದ್ದು ಅದರಂತೆ ಬುಧವಾರ ಕೋಟ ಶ್ರೀ ನಾರಾಯಣ ಗುರು ಸೇವಾ ಸಂಘ ಆಕ್ರೋಶ ವ್ಯಕ್ತಪಡಿಸಿ ಕೋಟ ಆರಕ್ಷಕ ಠಾಣೆಗೆ ತೆರಳಿ ಠಾಣಾಧಿಕಾರಿ ಸಂತೋಷ್ ಬಿ.ಪಿ ಇವರಿಗೆ ದೂರು ನೀಡಿದೆ.

ಈ ಬಗ್ಗೆ ಶೀಘ್ರ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಸಚಿವ ಕೋಟ ಈವರೆಗೆ ರಾಜ್ಯದಲ್ಲೆ ಸಭ್ಯ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಅಂತವರ ಬಗ್ಗೆ ಇಲ್ಲಸಲ್ಲದ ಆರೋಪ ಅವಹೇಳನ ಸಮುದಾಯ ಅಥವಾ ಅವರ ಅಭಿಮಾನಿಗಳು ಸಹಿಸಲ್ಲ ಈ ರೀತಿಯ ಬರಹಯುಕ್ತ ಪೋಸ್ಟರ್ ಇನ್ನು ಮುಂದೆಯೂ ಯಾರ ಬಗ್ಗೆಯೂ ಮಾಡಕೂಡದು ಆ ರೀತಿಯ ಶಿಕ್ಷೆ ವಿಧಿಸಬೇಕು ಎಂದು ಸಂಘದ ಅಧ್ಯಕ್ಷ ಜಿ.ಸದಾನಂದ ಪೂಜಾರಿ ತಮ್ಮ ಆಕ್ರೋಶದಲ್ಲಿ ವ್ಯಕ್ತಪಡಿಸಿದ್ದಾರೆ.ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಬಿಲ್ಲವ,ಕಾರ್ಯದರ್ಶಿ ಮನೋಹರ್ ಪೂಜಾರಿ, ಯುವ ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ,ಸಂತೋಷ್ ಪೂಜಾರಿ ತೆಕ್ಕಟ್ಟೆ ಉಪಸ್ಥಿತರಿದ್ದರು.