ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಇಂದಿಗೆ 200 ವರ್ಷ ಪೂರೈಸಿದ ಸಂಭ್ರಮದಲ್ಲಿ ಶ್ರೀವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಅವರಾಲುಮಟ್ಟು

Posted On: 26-01-2021 06:11PM

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಲಿಮಾರು ಪಂಚಾಯಿತಿ ವ್ಯಾಪ್ತಿಯ ಹಲವಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಶಾಲೆ ಅನುದಾನಿತ ಶ್ರೀ ವೆಂಕಟರಮಣ ಹಿರಿಯ ಪ್ರಾಥಮಿಕ ಶಾಲೆ ಇಂದು‌ 200 ವರ್ಷ ಪೂರೈಸಿದ ಸಂಭ್ರಮದಲ್ಲಿದೆ.

1821 ಜನವರಿ 27ರಂದು ಆರಂಭವಾದ ಈ ಶಾಲೆಯು ಗ್ರಾಮೀಣ ಭಾಗದ ಮಕ್ಕಳಿಗೆ ಒಂದನೇ ತರಗತಿಯಿಂದ ಏಳನೇ ತರಗತಿವರೆಗಿನ ಶಿಕ್ಷಣದ ಕನಸನ್ನು ನನಸು ಮಾಡಿತ್ತು. ಇಲ್ಲಿ ಕಲಿತ ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ವೃತ್ತಿ ನಿರತರಾಗಿದ್ದಾರೆ.

ಆಂಗ್ಲ ಮಾಧ್ಯಮದ ಭರಾಟೆಯಲ್ಲಿ ಅಪರೂಪವೆನ್ನುವಂತೆ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮದ ಶಾಲೆಯೊಂದು 200 ವರ್ಷ ಪೂರೈಸಿರುವುದು ಅವರಾಲುಮಟ್ಟು ಗ್ರಾಮದ ಜನತೆಗೆ ಹೆಮ್ಮೆಯೊಂದಿಗೆ ಖುಷಿಯನ್ನು ಉಂಟುಮಾಡಿದೆ.