ಯುವವಾಹಿನಿ (ರಿ.) ಪಡುಬಿದ್ರಿ ಘಟಕ : ವಿದ್ಯಾರ್ಥಿ ವೇತನ ವಿತರಣೆ
Posted On:
07-02-2021 01:34PM
ಮಕ್ಕಳಿಗೆ ಹೆತ್ತವರು ಅಂಕದ ಜೊತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಜೊತೆಗೆ ಸಂಸ್ಕೃತಿಯನ್ನು ತಿಳಿಸಿ, ಬೆಳೆಸಬೇಕಾದ ಅನಿವಾರ್ಯತೆಯಿದೆ. ಯುವವಾಹಿನಿ ಪಡುಬಿದ್ರಿ ಘಟಕವು ಯುವವಾಹಿನಿಯ ಧ್ಯೇಯವಾದ ವಿದ್ಯೆಗೆ ಮಹತ್ವ ನೀಡುವ ಕಾರ್ಯಕ್ರಮವನ್ನು ಆಯೋಜಿಸಿರುವುದು ಅಭಿನಂದನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಒಂದನೆಯ ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು ಹೇಳಿದರು.
ಅವರು ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಜರಗಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ನಡೆದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.
ಅತಿಥಿಯಾಗಿ ಆಗಮಿಸಿದ ಲಯನ್ಸ್ ಕ್ಲಬ್ ಪಡುಬಿದ್ರಿಯ ನಿಕಟಪೂರ್ವ ಅಧ್ಯಕ್ಷರಾದ ಲಕ್ಷ್ಮಣ ಡಿ. ಪೂಜಾರಿ ಮಾತನಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಪೂರ್ತಿ ನೀಡುವ ಇಂತಹ ಕಾರ್ಯ ಶ್ಲಾಘನೀಯ, ವಿದ್ಯಾರ್ಥಿ ವೇತನ ಪಡೆದ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.
ವಿದ್ಯಾರ್ಥಿ ವೇತನ ವಿತರಣೆ :ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯನ್ನು ಪಡೆದ ಹಿತಾಕ್ಷಿ, ಎಸ್ಸೆಸ್ಸೆಲ್ಸಿಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ಶ್ರಾವ್ಯ ಆರ್. ಅಂಚನ್, ಸ್ಫೂರ್ತಿ ವೈ. ಕೋಟ್ಯಾನ್, ಶ್ರೇಯಸ್ ಪೂಜಾರಿ, ಶ್ರವಣ್ ಕುಮಾರ್, ವೃಶಾಲಿ ಎ. ಪೂಜಾರಿ, ಗೌರಿಕಾ ಜಿ. ಕುಕ್ಯಾನ್ ರಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ವಹಿಸಿದ್ದರು.
ವಿದ್ಯಾರ್ಥಿವೇತನದ ಮಹಾ ಪೋಷಕರಾದ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರಾದ ರಮೇಶ್ ಪಿ.ಬಿ ಯವರನ್ನು ಅಭಿನಂದಿಸಲಾಯಿತು.
ಸಮಾರಂಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಹಾಗೂ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿಯಾದ ಯೋಗೇಶ್ ಪೂಜಾರಿ ಮಾದುಮನೆ, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ಸ್ವಾಗತಿಸಿ, ಘಟಕದ ವಿದ್ಯಾನಿಧಿ ಸಂಚಾಲಕರಾದ ಡಾ. ಐಶ್ವರ್ಯ ಸಿ. ಅಂಚನ್ ಮತ್ತು ನಿಶ್ಮಿತ ಪಿ.ಎಚ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಶಾಶ್ವತ್ ಎಸ್. ವಂದಿಸಿದರು.