ಮಟ್ಟಾರು : ಹಿಂದೂ ಮಿಲನ, ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ
Posted On:
11-02-2021 08:55PM
ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಟ್ಟಾರು ಘಟಕದ ನೇತೃತ್ವದಲ್ಲಿ ಹಿಂದೂ ಮಿಲನ ಕಾರ್ಯಕ್ರಮ ಫೆಬ್ರವರಿ 26, ಶುಕ್ರವಾರ ಮಟ್ಟಾರಿನಲ್ಲಿ ನಡೆಯಲಿದೆ.
ಸಂಜೆ ಗಂಟೆ 3 ರಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಪ್ರಧಾನ ಅರ್ಚಕರಾದ ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯರ ನೇತೃತ್ವದಲ್ಲಿ ಅಸ್ಟಮ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ನಡೆಯಲಿದೆ.
ಸಂಜೆ 6.30 ರಿಂದ 7.30 ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 7:30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಆಶೀರ್ವಚನ, ಮಂಗಳೂರು ವಿಭಾಗ ಧರ್ಮ ಜಾಗರಣ ಸಂಯೋಜಕರಾದ ಪ್ರಕಾಶ್ ಮಲ್ಪೆ ಇವರಿಂದ ದಿಕ್ಸೂಚಿ ಭಾಷಣ ಹಾಗೂ ರಾತ್ರಿ 9 ರಿಂದ ಅನ್ನಸಂತರ್ಪಣೆ ನಡೆಯಲಿದೆ.
9.30 ರಿಂದ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಕರುನಾಡ ಗಾನ ಗಂಧರ್ವ ಬಿರುದಾಂಕಿತ ಜಗದೀಶ್ ಆಚಾರ್ಯ ಪುತ್ತೂರು ಇವರಿಂದ ಸಂಗೀತ ಗಾನ ಸಂಭ್ರಮ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.