ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಜೇಸಿಐನ‌ ವತಿಯಿಂದ ಮೆಸ್ಕಾಂನ ಹಿರಿಯ ಲೈನ್ ಮ್ಯಾನ್ ಸತೀಶ್ ರವರಿಗೆ ಸಮ್ಮಾನ

Posted On: 27-02-2021 06:01PM

ಕಾಪು : ಜೇಸಿಐ ಭಾರತದ ನಿರ್ದೇಶನದಂತೆ ಸೆಲ್ಯೂಟ್ ದಿ ಸೈಲಂಟ್ ವರ್ಕರ್ ಕಾರ್ಯಕ್ರಮದಡಿ ಕಾಪು ಜೇಸಿಐನ‌ ವತಿಯಿಂದ ಮೆಸ್ಕಾಂನ ಹಿರಿಯ ಲೈನ್ ಮ್ಯಾನ್ ಸತೀಶ್ ಅವರನ್ನು ಸಮ್ಮಾನಿಸಿ, ಗೌರವಿಸಲಾಯಿತು.

ಮೆಸ್ಕಾಂನ ಸಹಾಯಕ ಕಾರ್ಯ ನಿವಾರ್ಹಕ ಇಂಜಿನಿಯರ್ ಹರೀಶ್ ಕುಮಾರ್, ಸೆಲ್ಯೂಟ್ ದಿ ಸೈಲೆಂಟ್ ವರ್ಕರ್ ಕಾರ್ಯಕ್ರಮದ ರಾಷ್ಟ್ರೀಯ ಸಂಯೋಜಕಿ ಸೌಮ್ಯ ರಾಕೇಶ್ ಮುಖ್ಯ ಅತಿಥಿಗಳಾಗಿ‌ ಭಾಗವಹಿಸಿದ್ದರು.

ಕಾಪು ಜೇಸಿಐ ಅಧ್ಯಕ್ಷೆ ಅರುಣಾ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಜೇಸಿಐನ ಪೂರ್ವ ವಲಯಾಧ್ಯಕ್ಷ ರಾಕೇಶ್ ಕುಂಜೂರು, ನಿಕಟಪೂರ್ವ ಅಧ್ಯಕ್ಷ ವಿನೋದ್ ಕಾಂಚನ್, ಕಾರ್ಯದರ್ಶಿ ಶ್ರುತಿ ಶೆಟ್ಟಿ, ಜೇಸಿರೆಟ್ ಅಧ್ಯಕ್ಷೆ ಗಾಯತ್ರಿ ಆಚಾರ್ಯ, ಪದಾಧಿಕಾರಿಗಳು, ಮೆಸ್ಕಾಂ ಅಧಿಕಾರಿಗಳು, ಸಿಬಂದಿಗಳು ಉಪಸ್ಥಿತರಿದ್ದರು.